More

    ನಾಳೆಯಿಂದ ಹೇಮೆಯಿಂದ ನಾಲೆಗೆ ನೀರು; ಇಂಜಿನಿಯರ್ ಕೆ.ಎನ್.ನಳಿನಿ

    ಹಾಸನ: ಗೊರೂರಿನ ಹೇಮಾವತಿ ಜಲಾಶಯದಿಂದ ಕುಡಿಯುವ ಉದ್ದೇಶದಿಂದ ಆ.9 ಬುಧವಾರದಿಂದ ಸೆ.12 ರ ವರೆಗೆ ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನಿಸಲಾಗಿದೆ. ಹೇಮಾವತಿ ಜಲಾಶಯಕ್ಕೆ ಪ್ರಸಕ್ತ ವರ್ಷ ನೀರಿನ ಒಳ ಹರಿವು ನಿರಾಶದಾಯವಾಗಿರುವುದರಿಂದ ನೀರಿನ ಅಭಾವ ನೀಗಿಸಿಕೊಳ್ಳಲು ಜಲಾಶಯದಲ್ಲಿರುವ ನೀರಿನ ಲಭ್ಯತೆಯನ್ನು ಅನುಸರಿಸಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾಗೂ ಕೆರೆಗಳಿಗೆ ನೀರನ್ನು ತುಂಬಿಸುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಮಾವತಿ ಜಲಾಶಯ ಯೋಜನೆ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಹೇಮಾವತಿ ಯೋಜನಾ ವೃತ್ತ ಸೂಪರಿಂಟೆಂಡೆಂಟ್ ಇಂಜಿನಿಯರ್ ಕೆ.ಎನ್.ನಳಿನಿ ತಿಳಿಸಿದ್ದಾರೆ.
    ಒಟ್ಟು 35 ದಿನಗಳ ಕಾಲ ಹೇಮಾವತಿ ಎಡದಂಡೆ ಮತ್ತು ಬಲದಂಡೆ ಹಾಗೂ ಬಲ ಮೇಲ್ದಂಡೆ ನಾಲೆಗಳಲ್ಲಿ ನೀರು ಹರಿಸಲಾಗುವುದು. ಈ ನೀರನ್ನು ನಿಗದಿತ ಉದ್ದೇಶಕ್ಕಾಗಿಯೇ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ಹೇಮಾವತಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ನಾಲಾ ನೀರನ್ನು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
    ಒಂದು ವೇಳೆ ರೈತರು ಇಚ್ಚಿಸಿದಲ್ಲಿ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯಲು ಅಭ್ಯಂತರವಿಲ್ಲ. ಸೂಚನೆಯನ್ನು ಮೀರಿ ನಾಲಾ ನೀರನ್ನು ಉಪಯೋಗಿಸಿಕೊಂಡು ನೀರಾವರಿ ಬೆಳೆ ಬೆಳೆಯಲು ರೈತರು ಪ್ರಯತ್ನಿಸಿದ್ದಲ್ಲಿ ಆಗಬಹುದಾದ ನಷ್ಟಕ್ಕೆ ಹೊಣೆ ಮತ್ತು ಜವಾಬ್ದಾರಿ ಇಲಾಖೆಯದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts