More

    ನಾಳೆ ಸಾಲಗಾಮೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ:

    ಹಾಸನ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾ.31ರ ಭಾನುವಾರ ಮಧ್ಯಾಹ್ನ ಸಾಲಗಾಮೆಯಲ್ಲಿ ಆ ಭಾಗದ ಎಂಟು ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಸ್ಥಳೀಯ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ತಿಳಿಸಿದರು.
    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಿಗದಿಯಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಚಿವ ಎಚ್.ಡಿ.ರೇವಣ್ಣ, ಲೋಕಸಭೆ ಚುನಾವಣೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಜಿಪಂ ಮಾಜಿ ಸದಸ್ಯರಾದ ಭವಾನಿ ರೇವಣ್ಣ ಮೊದಲಾದವರು ಭಾಗಿಯಾಗಲಿದ್ದಾರೆ. ಸಭೆಗೆ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
    ತಾವು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಮಾಡಿದ್ದು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಉತ್ತಮ ವಾತಾವರಣ ಇದೆ. ಹೋದ ಕಡೆಯೆಲ್ಲೆಲ್ಲಾ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಎಲ್ಲ ಮುಖಂಡರು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಗಿಂತಲೂ ವಾತಾವರಣ ತುಂಬಾ ಚೆನ್ನಾಗಿದೆ. ಲೋಕಸಭೆ ಚುನಾವಣೆಯಲ್ಲಿ ಅಲ್ಪ ಸಂಖ್ಯಾತ ಬಾಂಧವರೂ ಸೇರಿದಂತೆ ಹಾಸನ ವಿಧಾನಸಭಾ ಕ್ಷೇತ್ರದ ಎಲ್ಲಾ ವರ್ಗದ ಜನರು ನಮಗೆ ಬೆಂಬಲ ನೀಡಲಿದ್ದಾರೆ ಎಂದು ಸ್ವರೂಪ್ ವಿಶ್ವಾಸ ವ್ಯಕ್ತಪಡಿಸಿದರು.
    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರೇವಣ್ಣ ಅವರು ಹಾಗೂ ಪ್ರಜ್ವಲ್ ರೇವಣ್ಣ ಅವರು ಹಾಗೂ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಜಿಲ್ಲೆಯ ಜನರು ನಮ್ಮ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎಸ್.ಎಚ್.ವಾಸುದೇವ್, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಮೊದಲಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts