More

    ನಿಗದಿತ ಸಮಯದಲ್ಲಿ ನರೇಗಾ ಕೆಲಸ ಪೂರ್ಣಗೊಳಿಸಿ

    ಗೌರಿಬಿದನೂರು : ತಾಲೂಕಿನ ಮಣಿಪಾಲ ಸೇರಿ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಶುಕ್ರವಾರ ಜಿಲ್ಲಾ ಪಂಚಾಯಿತಿ ಸಿಇಒ ಬಿ.ೌಜೀಯಾ ತರನ್ನುಮ್ ಪರಿಶೀಲಿಸಿದರು.

    ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬ ಪರಿಕಲ್ಪನೆಯಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷವಾದ ಒತ್ತು ನೀಡಿ ಕೂಲಿಕಾರ್ಮಿಕರ ಹಾಗೂ ರೈತರ ಆರ್ಥಿಕತೆ ವೃದ್ಧಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕೊಟ್ಟಿದ್ದು ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಪಿಡಿಒಗಳಿಗೆ ಸೂಚಿಸಿದರು.

    ಸಮುದಾಯ ಅಭಿವೃದ್ಧಿ ಕೆಲಸಗಳ ಜತೆಗೆ ರೈತರು ಜಮೀನುಗಳಲ್ಲಿ ಯೋಜನೆಯಡಿ ಕೆಲಸಗಳನ್ನು ಮಾಡಬಹುದಾಗಿದ್ದು, ಉದ್ಯೋಗ ಸೃಷ್ಠಿಗೆ ಸದಾವಕಾಶವಾಗಿದೆ. ಕೆಲಸದ ವೇಳೆ ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು, ತಪ್ಪದೆ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

    ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಆದ್ದರಿಂದ ಆಡಳಿತದಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪಿಡಿಒಗಳು ಈ ಅವಕಾಶ ಸದ್ಬಳಕೆ ಮಾಡಿಕೊಂಡು ಮಾದರಿ ಕೆಲಸಗಳನ್ನು ಮಾಡಿ ತೋರಿಸಬೇಕು. ಇಲ್ಲದ ಸಬೂಬುಗಳನ್ನು ಹೇಳದಂತೆ ತಾಪಂ ಇಒ ಎನ್.ಮುನಿರಾಜು ತಾಕೀತು ಮಾಡಿದರು. ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts