More

    ನಿಗಮ, ಮಂಡಳಿ ಆಯ್ಕೆ ವಿಚಾರದಲ್ಲಿ ನನಗೆ ಅತೃಪ್ತಿ ಇದೆ : ವಿ.ಶ್ರೀನಿವಾಸಪ್ರಸಾದ್

    ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಪಂಚೆಯನ್ನು ಮುಳ್ಳಿನಿಂದ ಹುಷಾರಾಗಿ ತೆಗೆಯಬೇಕು. ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
    ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಿಂದಿಗಿಂತ ಬದಲಾಗಿದ್ದಾರೆ ಅಂತನೂ ಹೇಳೋಕಾಗಲ್ಲ. ಬದಲಾಗಿಲ್ಲ ಅಂತಲೂ ಹೇಳೋಕಾಗಲ್ಲ. ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ. ಮುಖ್ಯಮಂತ್ರಿ ಪದವಿ ಅಂದುಕೊಂಡಷ್ಟು ಸುಲಭವಲ್ಲ. ಅಧಿಕಾರ ನಡೆಸೋದು ಬಹಳ ಕಠಿಣ ಕೆಲಸ ಎಂದರು.
    ನನಗೆ ಅತೃಪ್ತಿ ಇದೆ: ನಿಗಮ, ಮಂಡಳಿ ಆಯ್ಕೆ ವಿಚಾರದಲ್ಲಿ ನನಗೆ ಅತೃಪ್ತಿ ಇದೆ. ಇನ್ನು ಉತ್ತಮವಾಗಿ ನೇಮಕಾತಿ ಮಾಡಬಹುದಿತ್ತು. ಎಲ್ಲರ ಸಲಹೆ ಪಡೆದು ಮಾಡಬಹುದಿತ್ತು ಅನ್ನೋದು ನನ್ನ ಅಭಿಪ್ರಾಯ. ಸಿಎಂಗೆ ಬಾಕಿ ಇರೋದು ಎರಡೂವರೆ ವರ್ಷ ಅಷ್ಟೇ. ಅಷ್ಟರ ಒಳಗೆ ಏನಾದರು ಮಾಡಬೇಕಲ್ಲವೇ? ಎಂದರು.
    ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಲ್ಲ. ಅದಕ್ಕಾಗಿ ಪಕ್ಷದ ಹೈಕಮಾಂಡ್ ಇದೆ. ಹಿರಿಯ ನಾಯಕರಿದ್ದಾರೆ. ಸಿಎಂಗೆ ಕಾರ್ಯದೊತ್ತಡ ಇದ್ದೇ ಇರುತ್ತೆ. ಸಿದ್ದರಾಮಯ್ಯ ಸೋತಿದ್ದು ಇದರಿಂದಲೇ ಅಲ್ವೇ? ಎಂದರು.
    ಮುಖ್ಯಮಂತ್ರಿಗೆ ಪರಮಾಧಿಕಾರ ಇರುತ್ತದೆ. ಅದರಂತೆ ಬುದ್ಧಿವಂತಿಕೆ ಇರಬೇಕು. ಸಿದ್ದರಾಮಯ್ಯಗೆ ಬುದ್ಧಿವಂತಿಕೆ ಇರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಲ್ಪ ಬುದ್ಧಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಅಂತ ಹೇಳುತ್ತಿದ್ದೇನೆ ಎಂದರು.
    ಉಪ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. ಇದಕ್ಕಾಗಿ ಹಿಗ್ಗಿ ಹೀರೇಕಾಯಿ ಆಗಬೇಕಿಲ್ಲ. ವಿಪಕ್ಷಗಳು ಕುಸಿದು ಹೋಗಿವೆ. ತಿಹಾರ್ ಜೈಲಿನಲ್ಲಿದ್ದವನನ್ನು ಅಧ್ಯಕ್ಷರನ್ನಾಗಿ ಮಾಡಿದ್ರೆ ಇನ್ನೇನಾಗುತ್ತೆ. ಹಾಗಾಗಿ ಅದರ ಲಾಭ ಬಿಜೆಪಿಗೆ ಬಂದಿದೆ ಅಷ್ಟೇ ಎಂದು ಕುಟುಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts