More

    ನಿಮ್ಮ ಮತಗಟ್ಟೆ ಅರಿತು ತಪ್ಪದೇ ಮತದಾನ ಮಾಡಿ

    ಕಂಪ್ಲಿ: ನಿಮ್ಮ ಮತಗಟ್ಟೆ ಅರಿತು ತಪ್ಪದೇ ಮತದಾನ ಮಾಡಬೇಕು ಎಂದು ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ಗೌಸಿಯಾಬೇಗಮ್ ಹೇಳಿದರು.ಇಲ್ಲಿನ ಬಿಎಸ್‌ವಿ ಶಾಲೆಯ ಮತಗಟ್ಟೆಯಲ್ಲಿ ಶನಿವಾರ ಪುರಸಭೆ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ಚುನಾವಣಾ ಆಯೋಗದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ಇದನ್ನೂ ಓದಿ:ಎಂ ಎಚ್ ಕಾಲೇಜಿನಿಂದ ಮತದಾನ ಜಾಗೃತಿ ಜಾಥಾ

    ಪ್ರತಿ ಮತಗಟ್ಟೆಯಲ್ಲಿಯೂ ನೂರಕ್ಕೆ ನೂರರಷ್ಟು ಮತದಾನವಾಗಬೇಕಿದೆ. ಯಾವುದೇ ಕಾರಣಕ್ಕೂ ಮತದಾರರು ಮತದಾನದಿಂದ ವಂಚಿತರಾಗದಂತೆ ಜಾಗೃತಿವಹಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದರು.

    ಮಾನವ ಸರಪಳಿ

    ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಘೋಷಣೆ ಕೂಗಿದರು. ಮುಖ್ಯಾಧಿಕಾರಿ ಡಾ.ಎನ್.ಶಿವಲಿಂಗಪ್ಪ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮುಖ ಬೀದಿಗಳಲ್ಲಿ ಜಾಗೃತಿಜಾಥ ಕೈಗೊಳ್ಳಲಾಯಿತು.

    ಕಂಪ್ಲಿ ವಿದ್ಯಾವರ್ಧಕ ಸಂಘದ ಪದಾಧಿಕಾರಿ ಶಾಂತಿಲಾಲ್ ಬಾಲಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಗಿರೀಶ್‌ಬಾಬು, ಉಪ ತಹಸೀಲ್ದಾರ್ ಬಿ.ರವೀಂದ್ರಕುಮಾರ್, ಇಸಿಒ ಜಿ.ವೀರೇಶ್, ಉಪ ಪ್ರಾಚಾರ್ಯ ಟಿ.ಎಂ.ಬಸವರಾಜ, ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ, ವಿವಿಧ ಇಲಾಖೆಗಳ ಮಹಿಳಾ ಸಿಬ್ಬಂದಿ, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts