More

    ನಿಮ್ಮ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವೆ


    ಯಾದಗಿರಿ: ರಾಜ್ಯದ ಸರಕಾರಿ ಪ್ರಥಮ ದರ್ಜಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಭರವಸೆ ನೀಡಿದರು.

    ಸೇವಾ ಕಾಯಂಗೊಳಿಸುವ ಬೇಡಿಕೆಯೊಂದಿಗೆ ಅನಿರ್ಧಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿ, ಇಲ್ಲಿನ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮನವಿ ಸ್ವೀಕರಿಸಿದ ಅವರು, ಕಳೆದ ಅನೇಕ ವರ್ಷಗಳಿಂದ ಸರಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಕನಿಷ್ಠ ಸೌಲಭ್ಯಗಳೊಂದಿಗೆ, ಗರಿಷ್ಠ ಸೇವೆ ಸಲ್ಲಿಸುತ್ತಿರುವುದು ನನ್ನ ಗಮನದಲ್ಲಿದೆ. ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬಿತವಾಗಿವೆ. ಕಾಯಂ ಉಪನ್ಯಾಸಕರಷ್ಟೇ ವಿದ್ಯಾರ್ಹತೆ ಹೊಂದಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗುವುದು. ನಿಮ್ಮಗಳ ನ್ಯಾಯಯುತ ಬೇಡಿಕೆಗಳನ್ನು ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ತಮ್ಮ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದರು.

    ಉಪನ್ಯಾಸಕ ಡಾ.ಸಿದ್ಧರಾಜರೆಡ್ಡಿ, ಅತಿಥಿ ಉಪನ್ಯಾಸಕರಾಗಿ ಕಳೆದ 15-20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವವರನ್ನು ಇಲ್ಲಿಯವರೆಗಿನ ಎಲ್ಲ ಸರಕಾರಗಳು ನಿರ್ಲಕ್ಷಿಸುತ್ತಲೇ ಬಂದಿದ್ದು, ನಿರಂತರ ಶೋಷಣೆ ಅನುಭವಿಸುತ್ತಲೇ ಬಂದಿವೆ. ಕಳೆದ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಸರಕಾರ ಅಸ್ತಿತ್ವಕ್ಕೆ ಬಂದರೆ, ಪ್ರಥಮ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮಾನವೀಯ ನೆಲೆಯ ಆಧಾರದಲ್ಲಿ ಕಾಯಂ ಗೊಳಿಸುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿ ಬದ್ಧತೆ ಪ್ರದಶರ್ಿಸಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚಿನ ಅತಿಥಿ ಉಪನ್ಯಾಸಕರಿದ್ದು, ಇತರ ಇಲಾಖೆಗಳ ಅರೆಕಾಲಿಕ ನೌಕರರನ್ನು ಕಾಯಂ ಗೊಳಿಸುವ ಕಾರ್ಯ ಕೈಗೊಂಡಿರುವ ಸರಕಾರ ಅತಿಥಿ ಉಪನ್ಯಾಸಕರತ್ತ ಕೂಡಾ ಕೃಪಾದೃಷ್ಟಿ ಬೀರಲಿ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts