More

    ನಿಯಮ ಉಲ್ಲಂಘಿಸಿದವರಿಗೆ ಸರ್ಕಾರಿ ಕ್ವಾರಂಟೈನ್

    ಧಾರವಾಡ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದ ಐವರನ್ನು ಮಂಗಳವಾರ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಕೋವಿಡ್ ಸೋಂಕಿತರೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ ಜನರನ್ನು ಗುರುತಿಸಿ ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಇವರೆಲ್ಲರ ಮೇಲೆ ನಿಗಾ ವಹಿಸಿದ್ದು, ವಲಯದಿಂದ ಹೊರಬಂದ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ಲಭ್ಯವಾಗುತ್ತಿದೆ. ಈ ಮಾಹಿತಿ ಆಧರಿಸಿ ನವಲೂರ ಪ್ರದೇಶದಲ್ಲಿ ಹೋಂ ಕ್ವಾರಂಟೈನ್​ನಲ್ಲಿರುವವರ ಮನೆಗಳಿಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಿದ್ದರು. ಆದಾಗ್ಯೂ ಹೊರಗಡೆ ಸಂಚಾರ ನಡೆಸಿದ್ದ ಐದು ಜನರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಯ್ಯನಗೌಡ ಪಾಟೀಲ ನೇತೃತ್ವದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ತಂಡ ವಶಪಡಿಸಿಕೊಂಡು ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಿದ್ದಾರೆ.

    533 ಶಂಕಿತರು ಪತ್ತೆ

    ಧಾರವಾಡ: ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ 24 ಗಂಟೆ ಅವಧಿಯಲ್ಲಿ 533 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾ ವಹಿಸಲಾಗಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಸೋಮವಾರ 10,088 ನಿಗಾವಹಿಸಿದವರ ಸಂಖ್ಯೆ ಮಂಗಳವಾರ 10,621ಕ್ಕೆ ಏರಿಕೆಯಾಗಿದೆ.

    ಈವರೆಗೆ ಜಿಲ್ಲೆಯಲ್ಲಿ 9951 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 8162 ಜನರ ವರದಿ ನೆಗೆಟಿವ್ ಬಂದಿವೆ. 26 ಪ್ರಕರಣದಲ್ಲಿ ಪಾಸಿಟಿವ್ ಬಂದಿದ್ದು, 19 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 1770 ವರದಿಗಳು ಬರಬೇಕಿದೆ. ಸೋಮವಾರ ಬಾಕಿ ಇದ್ದ 1849 ವರದಿಗಳ ಪೈಕಿ 79 ವರದಿಗಳು ನೆಗೆಟಿವ್ ಬಂದಿವೆ.

    ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 10,621 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 5434 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆ ಪ್ರತ್ಯೇಕ ವಾರ್ಡ್​ಗಳಲ್ಲಿ 21 ಜನ ದಾಖಲಾಗಿದ್ದಾರೆ. 3,135 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 2031 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts