More

    ನಿರ್ಭಿತಿಯಿಂದ ಮತದಾನ ಮಾಡಿ

    ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತದಾರರಲ್ಲಿ ಸಾಕ್ಷರತೆ ಮೂಡಿಸಲು ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಶನಿವಾರ ಆಯೋಜಿಸಲಾಗಿತ್ತು.
    ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಅವರು, ಸರ್ವರು ಯಾವುದೇ ಆಸೆ, ಅಮೀಷಕ್ಕೆ ಒಳಗಾಗದೆ ನಿರ್ಭಿತಿ ತಿಯಿಂದ ಮತದಾನ ಮಾಡವೇಕು ಎಂದು ಕರೆ ನೀಡಿದರು.
    ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಹಸ್ತಾಕ್ಷರ ಸಂಗ್ರಹ ಅಭಿಯಾನ ಜರುಗಿತು. ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್​  ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಶಂಕ್ರಣ್ಣ ವಣಿಕ್ಯಾಳ, ಪ್ರೊಬೇಷನರಿ ಅಧಿಕಾರಿ ಡಾ. ಗೋಪಾಲಕೃಷ್ಣ, ಡಿಡಿಪಿಐ ಶಾಂತಗೌಡ ಪಾಟೀಲ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಜಿ. ಸಂಗಾ ಇತರರಿದ್ದರು.

    ಮತದಾರರ ಜಾಗೃತಿ ಜಾಥಾ
    ನಗರದ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ಡಾ.ಎಸ್.ಎಂ.ಪಂಡಿತ್ ರಂಗಮಂದಿರವರೆಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ ಜಾಗೃತಿ ಜಾಥಾಗೆ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್ ಮತ್ತು ಜಿಲ್ಲಾಧಿಕಾರಿ ಶರತ್ ಬಿ. ಚಾಲನೆ ನೀಡಿದರು. ಜಾಥಾದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅರಿವು ಮೂಡಿಸುವ ಪ್ರಚಾರ ವಾಹನವು ಪಾಲ್ಗೊಂಡು ನುಡಿ ಸಮ್ಮೇಳನದ ಶ್ರವ್ಯ ಮಾಧ್ಯಮದ ಪ್ರಸಾರದೊಂದಿಗೆ ಗಮನ ಸೆಳೆಯಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ-ಯುವತಿಯರು ಜಾಥಾದಲ್ಲಿ ಹೆಜ್ಜೆ ಹಾಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts