More

    ನಿಷ್ಕ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯ


    ಯಾದಗಿರಿ: ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ಶರಣರು ತಮ್ಮ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ಸಹಾಯಕ ಆಯುಕ್ತ ಶಾ ಆಲಂ ಹುಸೇನ ತಿಳಿಸಿದರು.

    ನಗರದ ಜಿಲ್ಲಾ ಕಸಾಪ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾಯಕ ಶರಣರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಸರಳ ಜೀವನ, ಶುದ್ಧ ಧ್ಯಾನ, ನಿಷ್ಕ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಶರಣರು 12ನೇ ಶತಮಾನದಲ್ಲಿ ಸಾರಿದ್ದಾರೆ ಎಂದರು.

    ಪ್ರಾಚಾರ್ಯ ಪ್ರೋ.ಸವರ್ೋದಯ ಎಸ್.ಎಸ್., ಮಾತನಾಡಿ, 12ನೇ ಶತಮಾನವು ಧಾಮರ್ಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿಯನ್ನು ಉಂಟುಮಾಡಿದೆ. ಇವತ್ತಿನ ನಮ್ಮ ಸಂವಿಧಾನದ ಮಾದರಿಯಲ್ಲಿ ಅಂದಿನ ಅನುಭವ ಮಂಟಪ ಇತ್ತು. ಯಾರನ್ನೂ ಕೀಳಾಗಿ ಕಾಣಬಾರದು ಎಂಬುವುದು ಬಸವೇಶ್ವರರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿದ್ದಾರೆ ಎಂದು ಹೇಳಿದರು.

    ಶರಣದ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts