More

    ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಗೌರವ

    ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಲು ಮಲ್ಲಿಕಾರ್ಜುನ ಖರ್ಗೆ ಯಾವತ್ತೂ ಪ್ರಯತ್ನಿಸಲಿಲ್ಲ. ಆದರೆ ಅದಾಗಿಯೇ ಹುಡುಕಿಕೊಂಡು ಬಂದಿದೆ. ಇದು ನಿಷ್ಢಾವಂತ ಕಾರ್ಯಕರ್ತನಿಗೆ ಸಂದ ಗೌರವ. ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
    ಎನ್.ವಿ.ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಮತ್ತು ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ ಗಾಂಧಿ ಮತ್ತು ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಗತವೈಭವಕ್ಕೆ ಮರಳಲಿದೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಜನಪರ ಸರ್ಕಾರ ಸ್ಥಾಪಿಸುವುದೇ ಖರ್ಗೆ ಅವರಿಗೆ ಕೊಡಬಹುದಾದ ನಿಜವಾದ ಕೊಡುಗೆ ಮತ್ತು ಅಭಿಮಾನ ಎಂದರು.
    ಕಲ್ಯಾಣ ಕರ್ನಾಟಕದಲ್ಲಿ ಕಳೆದ ಬಾರಿ ಕಾಂಗ್ರೆಸ್ ೨೧ ಸ್ಥಾನ ಗೆದ್ದಿತ್ತು. ಮುಂಬರುವ ಚುನಾವಣೆಯಲ್ಲೂ ಈ ಭಾಗದ ೪೧ ಸ್ಥಾನಗಳ ಪೈಕಿ ಕನಿಷ್ಠ ೩೦ರಲ್ಲಿ ಗೆಲ್ಲಲು ಅಣಿಯಾಗಬೇಕು. ರಾಜ್ಯದಲ್ಲಿ ಅನೈತಿಕ ಸರ್ಕಾರವಿದ್ದು, ಭ್ರಷ್ಟಾಚಾರ ಎಲ್ಲೆ ಮೀರಿದೆ. ವಿಧಾನಸೌಧ ಗೋಡೆಗಳು ಲಂಚ ಲಂಚ ಲಂಚ ಎಂದು ಕೂಗುತ್ತಿವೆ ಎಂದು ವಾಗ್ದಾಳಿ ನಡೆಸಿದರು.
    ಖರ್ಗೆ ಕೇಂದ್ರದ ಸರ್ಕಾರದ ಮೇಲೆ ನಿರಂತರ ಒತ್ತಡ ತಂದು ಸಂವಿಧಾನದ ೩೭೧(ಜೆ) ಜಾರಿಗೆ ತಂದರೆ, ಬಿಜೆಪಿ ಸರ್ಕಾರ ಈ ಭಾಗಕ್ಕೆ ಕೇವಲ ಹೆಸರು ಬದಲಾಯಿಸಿದೆ. ನಾನು ಸಿಎಂ ಇದ್ದಾಗ ೩೭೧(ಜೆ) ಜಾರಿಗೆ ತರಲು ಎಚ್.ಕೆ. ಪಾಟೀಲ್ ನೇತೃತ್ವದ ಸಮಿತಿ ಮಾಡಿದ್ದೆ ನಮ್ಮ ಕಾಲದಲ್ಲಿ ೩೬ ಸಾವಿರ ಹುದ್ದೆ ಭರ್ತಿ ಮಾಡಲಾಗಿತ್ತು. ಆದರೆ ಈ ಬೇಜವಾಬ್ದಾರಿ ಸರ್ಕಾರ ಒಂದೇ ಒಂದು ಹುದ್ದೆ ತುಂಬಿಲ್ಲ ಎಂದು ಹರಿಹಾಯ್ದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಭಾಗದ ಪ್ರಗತಿಗೆ ೫೦೦೦ ಕೋಟಿ ರೂ. ನೀಡುವುದರ ಜತೆಗೆ ಖಾಲಿ ಹುz್ದÉ ಭರ್ತಿಗೂ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts