More

    ನೀತಿಸಂಹಿತೆ ಉಲ್ಲಂಘಿಸಿದರೆ ಪರವಾನಗಿ ರದ್ದು

    ಚಿತ್ರದುರ್ಗ: ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸಿದರೆ, ಉದ್ದಿಮೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಎಚ್ಚರಿಕೆ ನೀಡಿದರು.

    ನಗರಸಭೆ ಸಭಾಂಗಣದಲ್ಲಿ ಶನಿವಾರ ಬ್ಯಾಂಕರ್ಸ್‌, ಆಭರಣ ತಯಾರಕರು, ಮಾರಾಟಗಾರರು, ಹೋಟೆಲ್, ಲಾಡ್ಜ್, ಕಲ್ಯಾಣ ಮಂಟಪ, ಪೆಟ್ರೋಲ್ ಬಂಕ್, ಬಾರ್ ಅಂಡ್ ರೆಸ್ಟೋರೆಂಟ್, ಪ್ರಿಂಟಿಂಗ್ ಪ್ರೆಸ್‌ಗಳ ಮಾಲೀಕರು ಹಾಗೂ ಸಂಘಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದರು.

    ಚುನಾವಣೆ ಸುಗಮವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು. ಯಾವುದೇ ಅಕ್ರಮ ವ್ಯವಹಾರಗಳಿಗೆ ಅವಕಾಶ ನೀಡಬಾರದು. ದಾಸ್ತಾನು, ನಗದು ಹಾಗೂ ನೋಂದಣಿ ಪುಸ್ತಕಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.

    ಚುನಾವಣೆ ಪ್ರಚಾರ ಸಂಬಂಧ ಮುದ್ರಿಸುವ ಬ್ಯಾನರ್, ಕರಪತ್ರ, ಬಿತ್ತಿಪತ್ರಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ಗಳ ಹೆಸರು, ಮುದ್ರಣಗೊಂಡ ಸಂಖ್ಯೆ ಸ್ಪಷ್ಟವಾಗಿ ನಮೂದಿಸಬೇಕು. ಗುರುತಿನ ಚೀಟಿ ಪಡೆದೇ ಲಾಡ್ಜ್ಗಳಲ್ಲಿ ರೂಂ ನೀಡಬೇಕು ಎಂದು ಹೇಳಿದರು.

    ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟದ ಮೇಲೆ ಮಿತಿ ಇರಬೇಕು. ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳೊಂದಿಗೆ ಕೈಜೋಡಿಸಿ ಅಕ್ರಮ ಎಸಗಬಾರದು ಎಂದು ಸೂಚಿಸಿದರು.

    ತಹಸೀಲ್ದಾರ್ ಡಾ.ನಾಗವೇಣಿ, ಪೌರಾಯುಕ್ತೆ ಎಂ.ರೇಣುಕಾ, ತಾಪಂ ಇಒ ಅನಂತರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್ ಇತರರಿದ್ದರು.

    ಪ್ರಕರಣ ದಾಖಲು: ನಿಯಮಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಗರದ ಜೆಸಿಆರ್ ಬಡಾವಣೆಯ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ವಿರುದ್ಧ ಅಬಕಾರಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಉಪವಿಭಾಗಾಧಿಕಾರಿ ನೇತೃತ್ವದ ತಂಡ ಗಾಂಧಿ ವೃತ್ತ, ಬಸ್ ನಿಲ್ದಾಣ ಸೇರಿ ವಿವಿಧ ಪ್ರದೇಶಗಳ ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್‌ಐಎಲ್, ಪಬ್‌ಗಳ ಮೇಲೆ ಅನಿರೀಕ್ಷಿತ ಭೇಟಿ ನೀಡಿ ಶುಕ್ರವಾರ ತಪಾಸಣೆ ನಡೆಸಿದರು. ಎಸಿ ಕಾರ್ತಿಕ್, ತಹಸೀಲ್ದಾರ್ ಡಾ.ನಾಗವೇಣಿ, ಅಬಕಾರಿ ಇನ್ಸ್‌ಪೆಕ್ಟರ್ ಶೇಕ್ ಇಮ್ರಾನ್, ಉಪತಹಸೀಲ್ದಾರ್ ನಾಗರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts