More

    ನೀರಾವರಿ ಸೌಲಭ್ಯಗಳ ಸದುಪಯೋಗ ಪಡಿಯಿರಿ


    ಯಾದಗಿರಿ: ರೈತರು ಸಕರ್ಾರದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ್ ಸಲಹೆ ನೀಡಿದರು.

    ಗುರುವಾರ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಪಂಪ್ಸೆಟ್ ಹಾಗೂ

    ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿ, ಜಮೀನಿನಲ್ಲಿ ಆಗಾಗ ಮಣ್ಣು ಪರೀಕ್ಷೆ ಮಾಡಿಸಬೇಕು. ಇದರಿಂದ ಯಾವ ಬೆಳೆ ಬೆಳೆದರೆ ಆದಾಯ ಸಿಗಲಿದೆ ಎಂಬ ಮಾಹಿತಿ ಸಿಗುತ್ತದೆ. ನೀರಾವರಿ ವ್ಯವಸ್ಥೆ ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

    ಸರ್ಕಾರ ಗ್ರಾಮೀಣ ಭಾಗದಲ್ಲಿ ರೈತರಿಗೆ ಕೃಷಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬರೂ ಅವುಗಳ ಲಾಭ ಪಡೆದುಕೊಂಡು ಸೌಲಭ್ಯಗಳ ಬಗ್ಗೆ ನಿಮ್ಮ ಸಮುತ್ತಮುತ್ತಲಿನವರಿಗೆ ತಿಳಿವಳಿಕೆ ಮೂಡಿಸಬೇಕು ಎಂದರು.

    ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಭು ದೊರೆ, ಪ್ರಮುಖರಾದ ಶರಣಗೌಡ ಬಾಡಿಯಾಳ, ಬಸವರಾಜ ಬೂದುರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts