More

    ನೀರಿನ ಘಟಕ ಸೇವೆಗೆ ಚಾಲನೆ

    ಹನೂರು: ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನಾಗರಿಕರೇ ನೋಡಿಕೊಳ್ಳಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

    ಪಟ್ಟಣದ 6 ಮತ್ತು 9ನೇ ವಾರ್ಡಿನಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ತಲಾ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

    ಹನೂರು ಪಟ್ಟಣ ಸುಮಾರು 12 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. 6 ಮತ್ತು 9ನೇ ವಾರ್ಡಿನ ಜನರು ಶುದ್ಧ ಕುಡಿವ ನೀರಿಗಾಗಿ ಬೇರೆ ವಾರ್ಡ್‌ಗಳಿಗೆ ಅಲೆಯಬೇಕಿತ್ತು. ನಿವಾಸಿಗಳ ಮನವಿ ಮೇರೆಗೆ ನೀರಿನ ಘಟಕ ಸ್ಥಾಪಿಸಲಾಗಿದೆ. ಜನರು ಯಾವುದೇ ಕಾರಣಕ್ಕೂ ನೀರನ್ನು ಪೋಲು ಮಾಡಬಾರದು. ಈ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಘಟಕವು ಸುಸ್ಥಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

    ಪಟ್ಟಣದ ಅಭಿವೃದ್ಧಿಗೆ ಒತ್ತು: ವಿಧಾನಸಭಾ ಕ್ಷೇತ್ರಕ್ಕೆ ದೊರೆತ ಅನುದಾನದಿಂದ ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿ, ನದಿ ಮೂಲದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆ, ಹುಬ್ಬೆಹುಣಸೆ, ರಾಮನಗುಡ್ಡೆ, ಗುಂಡಾಲ್ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ, ಏಕಲವ್ಯ ಶಾಲೆ, ಇಂದಿರಾಗಾಂಧಿ ಮಾದರಿ ವಸತಿ ಶಾಲೆ ಸ್ಥಾಪನೆ ಇತ್ಯಾದಿ ಅಭಿವೃದ್ಧಿ ಕಾರ್ಯಗಳು ನಡೆದಿವೆ.

    ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್‌ಕುಮಾರ್, ಮುಖ್ಯಾಧಿಕಾರಿ ಮಹೇಶ್‌ಕುಮಾರ್, ನಿರ್ಮಿತಿ ಕೇಂದ್ರದ ಎಇಇ ರವಿಕುಮಾರ್, ಎಇ ಮಹದೇವಶೆಟ್ಟಿ, ಮುಖಂಡರಾದ ಚಿಕ್ಕತಮ್ಮಯ್ಯ, ಮಂಜೇಶ್, ರವಿ, ಮಹೇಶ್, ನಿಂಗರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts