More

    ನೀರಿನ ಮೂಲ ನಿರಂತರ ಪರೀಕ್ಷಿಸಿ

    ಬಳ್ಳಾರಿ : ಮಳೆಗಾಲ ಆರಂಭದ ಹಿನ್ನಲೆ ಕುಡಿಯುವ ನೀರು ಕಲುಷಿತಗೊಳ್ಳುವ ಸಂಭವವಿದ್ದು, ಉಂಟಾಗಬಹುದಾದ ವಾಂತಿಭೇದಿ ಪ್ರಕರಣಗಳ ನಿಯಂತ್ರಣಕ್ಕಾಗಿ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಹೇಳಿದರು.
    ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆ ಮತ್ತು ವಿವಿಧ ಇಲಾಖೆಗಳ ಜಂಟಿಯಾಗಿ ಮಂಗಳವಾರ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಮಾತನಾಡಿದರು. ಯಾವುದೇ ರೀತಿಯ ಗಂಭೀರ ಪ್ರಕರಣಗಳು ಸಂಭವಿಸದಂತೆ ಎಚ್ಚರವಹಿಸಬೇಕು. ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸಕಾಲದಲ್ಲಿ ನಿಯಮಾನುಸಾರ ಕ್ಲೋರಿನೇಷನ್ ಮಾಡಿಸಿ ನಿರಂತರವಾಗಿ ಪರೀಕ್ಷೆಗಳನ್ನು ಕೈಗೊಂಡು ಯಾವುದೇ ವಾಂತಿಭೇದಿ ಪ್ರಕರಣಗಳು ಉಂಟಾಗದಂತೆ ಗ್ರಾಪಂ ಒಳಗೊಂಡಂತೆ ಎಲ್ಲ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮವಹಿಸಿ ಎಂದರು.
    ಡಿಎಚ್‌ಒ ಡಾ.ವೈ.ರಮೇಶ ಬಾಬು ಮಾತನಾಡಿ, ಇಲ್ಲಿಯವರೆಗೆ 4027 ನೀರಿನ ಮೂಲಗಳನ್ನು ಪರೀಕ್ಷಿಸಿದ್ದು, ಅಶುದ್ಧವೆಂದು ಕಂಡು ಬಂದ ನೀರಿನ ಮೂಲಗಳನ್ನು ಸಕಾಲದಲ್ಲಿ ಪರೀಕ್ಷೆಗೊಳಪಡಿಸಿ ನೀರು ಪೂರೈಕೆಗೆ ಸ್ಥಳೀಯ ಸಂಸ್ಥೆಗಳೊಂದಿಗೆ ಕೈಜೋಡಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕ್ಷಯರೋಗ ಪರೀಕ್ಷೆ ಕೈಗೊಂಡ ನಂತರ ಶೇ.20ರಷ್ಟು ನೂತನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಆಶಾದಾಯಕವಾಗಿದೆ ಎಂದರು. ಮಳೆಯ ಆರಂಭದ ಹಿನ್ನೆಲೆಯಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆಗಳ ನಿಯಂತ್ರಣಕ್ಕೆ ಯಾವುದೇ ನ್ಯೂನ್ಯತೆ ಉಂಟಾಗದಂತೆ ನೀರಿನ ಸಂಗ್ರಹಗಾರಗಳನ್ನು ಪ್ರತಿ ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಸೊಳ್ಳೆ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯವಿದ್ದಲ್ಲಿ ಸ್ಥಳೀಯ ಪಂಚಾಯತಿಗಳೊಂದಿಗೆ ಚರ್ಚಿಸಿ ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚಿಸಿದರು. ಸಭೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಹಾಗೂ ನವಜಾತ ಶಿಶುಗಳ ಆರೈಕೆ ಕಾರ್ಯಕ್ರಮದ ಕುರಿತು ವ್ಯಾಪಕವಾಗಿ ಚರ್ಚಿಸಲಾಯಿತು.
    ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ಮರಿಯಂಬಿ, ಡಾ.ಇಂದ್ರಾಣಿ, ಡಾ.ವೀರೇಂದ್ರ ಕುಮಾರ, ಡಾ.ಹನುಮಂತಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts