More

    ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ

    ಹುಬ್ಬಳ್ಳಿ: ನವನಗರ, ಅಮರಗೋಳ ಹಾಗೂ ಗಾಮನಗಟ್ಟಿ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಆಗಿರುವ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಪಾಲಿಕೆಯ ವಲಯ ಕಚೇರಿ (ನಂ.4)ಯಲ್ಲಿ ಗುರುವಾರ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಕುರಿತು ಪಾಲಿಕೆ ಸದಸ್ಯರು ಹಾಗೂ ವಲಯ ಕಚೇರಿ ಅಧಿಕಾರಿಗಳೊಂದಿಗೆ ರ್ಚಚಿಸಿದರು. ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು.

    ಸ್ಥಳೀಯರು ಸಮಸ್ಯೆಗಳ ಬಗ್ಗೆ ಮೇಯರ್​ಗೆ ಅಹವಾಲುಗಳನ್ನು ಸಲ್ಲಿಸಿದರು. ಪಾಲಿಕೆ ಸದಸ್ಯರಾದ ಸುನೀತಾ ಮಾಳವಾಡಕರ, ಚಂದ್ರಶೇಖರ ಮನಗುಂಡಿ, ಮಂಜುನಾಥ ಬುರ್ಲಿ, ವಲಯ ಅಧಿಕಾರಿ ರಮೇಶ ನೂಲ್ವಿ, ಎಲ್ ಆಂಡ್ ಟಿ ಕಂಪನಿ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts