ನುಲಿಯ ಚಂದಯ್ಯ-ನಾರಾಯಣ ಗುರು ಜಯಂತಿ ಆಚರಣೆ

narana guruji
Published on

ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಗಸ್ಟ 31 ರಂದು ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರುಷುರಾಮ ಶಿನ್ನಾಳಕರ ಹೇಳಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ 31 ರಂದು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಮಹನೀಯರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸತಕ್ಕದ್ದು, ಇದಕ್ಕಾಗಿ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ಶಿಷ್ಠಾಚಾರದಂತೆ ನೀಡಿ ಆಹ್ವಾನಿಸಬೇಕು. ಎಲ್ಲೂ ಕೂಡ ಲೋಪ ದೋಷಗಳಾಗಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ನುಲಿಯ ಚಂದಯ್ಯ ಜಯಂತಿಯನ್ನು ಆ.31 ರಂದು ಜಿಲ್ಲಾಡಳಿತ ಭವನ ಆವರಣದಲ್ಲಿ ಬೆಳಿಗ್ಗೆ 9.30ಕ್ಕೆ ಕಲಾತಂಡಗಳೊಂದಿಗೆ ನುಲಿಯ ಚಂದಯ್ಯ ಭಾವಚಿತ್ರ ಮೇರವಣಿಗೆ ಮತ್ತು ಡಾ.ಬಿಆರ್.ಅಂಬೆಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ ಚವ್ಹಾಣ, ಸಮುಮುದಾಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net