More

    ನೂತನ ಬಸ್ ನಿಲ್ದಾಣದಲ್ಲಿರಲಿ ಪುಸ್ತಕ ಮಳಿಗೆ

    ಯಲ್ಲಾಪುರ: ಪಟ್ಟಣದಲ್ಲಿ ನಿರ್ವಣವಾಗುತ್ತಿರುವ ನೂತನ ಬಸ್ ನಿಲ್ದಾಣದಲ್ಲಿ ಪ್ರತ್ಯೇಕ ಪುಸ್ತಕ ಮಾರಾಟ ಮಳಿಗೆ ಸ್ಥಾಪಿಸಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಶ್ರೀರಂಗ ಕಟ್ಟಿ ಅವರು ಸಕ್ಕರೆ ಮತ್ತು ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ ಅವರಿಗೆ ಮನವಿ ಸಲ್ಲಿಸಿದರು.

    ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಪುಸ್ತಕ ಸಂಸ್ಕೃತಿ ಮತ್ತು ಓದುವ ಹವ್ಯಾಸ ಬೆಳೆಸಲು ಬಸ್ ನಿಲ್ದಾಣದಲ್ಲಿ ಪುಸ್ತಕ ಮಳಿಗೆ ಅಗತ್ಯವಾಗಿದೆ. ಈಗಾಗಲೇ ನೂತನ ಬಸ್ ನಿಲ್ದಾಣದ ಮಳಿಗೆಗಳ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರತ್ಯೇಕ ಪುಸ್ತಕ ಮಳಿಗೆಗೆ ಯಾವುದೇ ವ್ಯವಸ್ಥೆ ಮಾಡಿಲ್ಲ. ಹಳೇ ಬಸ್ ನಿಲ್ದಾಣದಲ್ಲಿ ಕನ್ನಡ ಪುಸ್ತಕ ಮತ್ತು ಪತ್ರಿಕೆಗಳನ್ನು ಮಾರಲು ಅವಕಾಶವಿತ್ತು. ನೂತನ ಬಸ್ ನಿಲ್ದಾಣದಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ಇದ್ದರು.

    ಮನವಿ ಸ್ವೀಕರಿಸಿದ ಸಚಿವ ಶಿವರಾಮ ಹೆಬ್ಬಾರ, ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ದೂರವಾಣಿ ಮೂಲಕ ಸಂರ್ಪಸಿ, ಪ್ರತ್ಯೇಕ ಪುಸ್ತಕ ಮಳಿಗೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಪೂರಕವಾಗಿ ಸ್ಪಂದಿಸಿದ್ದು, ಪ್ರತ್ಯೇಕ ಪುಸ್ತಕ ಮಳಿಗೆ ಸ್ಥಾಪಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀರಂಗ ಕಟ್ಟಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts