More

    ನೆನೆಗುದ್ದಿಗೆ ಬಿದ್ದ ಕಾಮಗಾರಿ ಪೂರ್ಣಗೊಳಿಸಿ


    ಯಾದಗಿರಿ: ನನ್ನ ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವ ಸಕರ್ಾರಿ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗುವಂತೆ ಸಂಬಂಸಿದ ಅಕಾರಿಗಳಿಗೆ ನೂತನ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸೂಚನೆ ನೀಡಿದರು.


    ಶಾಸಕರಾದ ನಂತರ ಇದೇ ಮೊದಲ ಬಾರಿಗೆ ಗುರುವಾರ ಇಲ್ಲಿನ ತಾಪಂ ಕಚೇರಿ ಸಭಾಂಗಣದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕುರಿತಾಗಿ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈ ಹಿಂದೆ ಏನಾಗಿದೆ ಎಂಬುದು ನನಗೆ ಬೇಕಿಲ್ಲ. ಆದರೆ, ಮುಂದೆ ಕ್ಷೇತ್ರದ ಅಭಿವೃದ್ಧಿ ನನ್ನ ಮೊದಲ ಅದ್ಯತೆ. ಹೀಗಾಗಿ ಅಪೂರ್ಣಗೊಂಡಿರುವ ಎಲ್ಲ ಕಾಮಗಾರಿಗಳು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ನಿದರ್ೇಶನ ನೀಡಿದರು.

    ಸಧ್ಯದಲ್ಲೇ ಮಳೆಗಾಲ ಆರಂಭಗೊಳ್ಳಲಿದೆ. ಮಳೆ ಬಂದರೆ ರಸ್ತೆಗಳು ಮತ್ತಷ್ಟು ಕೆಟ್ಟು ಸಾರ್ವಜನಿಕರಿಗೆ ತೊಂದರೆಯಾಗುವ ಸಾದ್ಯತೆ ಇದೆ. ಹೀಗಾಗಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಹದಗೆಟ್ಟಿದ್ದರೆ, ರಿಪೇರಿ ಮಾಡಲು ಈಗಲೇ ಕ್ರಿಯಾಯೋಜನೆ ಸಿದ್ದಪಡಿಸಬೇಕು. ಅಲ್ಲದೇ ಸೇತುವೆಗಳ ದುರಸ್ಥಿಗೂ ಆದ್ಯತೆ ನೀಡಬೇಕು ಎಂದರು.

    ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕೇಂದ್ರಗಳ ಕಟ್ಟಡ ನಿಮರ್ಾಣ ವಿಳಂಬವಾಗುತ್ತಿದೆ. ಕಟ್ಟಡ ನಿಮರ್ಾಣಕ್ಕೆ ಅನುದಾನದ ಕೊರತೆ ಇಲ್ಲ. ಆದರೆ, ಹಲವು ಕಡೆ ನಿವೇಶನದ ಸಮಸ್ಯೆ ಇದೆ. ಹೀಗಾಗಿ ಆಯಾ ಗ್ರಾಪಂ ಅಧ್ಯಕ್ಷ, ಸದಸ್ಯರೊಂದಿಗೆ ಅಕಾರಿಗಳು ಸಮನ್ವಯತೆ ಸಾಸಬೇಕು ಎಂದು ಹೇಳಿದರು.

    ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದರೆ, ಕೂಡಲೇ ಆರಂಭಿಸಬೇಕು. ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇನ್ನೆರಡು ದಿನಗಳಲ್ಲಿ ಶಾಲೆಗಳು ಆರಂಭಗೊಳ್ಳಲಿದ್ದು, ದಾಖಲಾತಿ ಆಂದೋಲನ ಪರಿಣಾಮಕಾರಿಯಾಗಿ ನಡೆಸಲು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅರಣ್ಯ, ತೋಟಗಾರಿಕೆ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು. ತಹಸೀಲ್ದಾರ್ ಅಣ್ಣಾರಾವ್, ತಾಪಂ ಇಒ ಬಸವರಾಜ ಶರಬೈ, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ಸಿಪಿಐ ಸುನೀಲ್ ಮೂಲಿಮನಿ, ವ್ಯವಸ್ಥಾಪಕ ಶಶಿಧರ ಹಿರೇಮಠ, ಶಿವರಾಯ ಗುಂಡಗುತರ್ಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts