More

    ನೆಪ ಹೇಳುವುದು ಬಿಟ್ಟು ಕೆಲಸ ಮಾಡಿ

    ಚಿಂಚೋಳಿ: ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಕುಂಟು ನೆಪ ಬಿಟ್ಟು ಸರಿಯಾಗಿ ಕೆಲಸ ಮಾಡಿ ಎಂದು ಶಾಸಕ ಡಾ. ಅವಿನಾಶ ಜಾಧವ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮನೆ ಮನೆಗೆ ಗುಣಮಟ್ಟದ ನೀರು ಪೂರೈಸಲು ಅಧಿಕಾರಿಗಳು ಮುಂದಾಗಬೇಕು. ಈಗಾಗಲೇ 2017-18ನೇ ಸಾಲಿನಲ್ಲಿ ಮಂಜೂರಾದ ಕಾಮಗಾರಿ ಪೂರ್ಣಗೊಳಿಸಲು ನಿರ್ಲಕ್ಷೃ ವಹಿಸುತ್ತಿರುವುದು ಏಕೆ ? ಎಂದು ಕಿಡಿಕಾರಿದರು.
    ಗುತ್ತಿಗೆದಾರರ ವಿಳಂಬ ನೀತಿಯಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಡಾ. ಜಾಧವ್, ನೋಟಿಸ್ ನೀಡಿ ಕೇಳದಿದ್ದರೆ ಕ್ರಮಕ್ಕೆ ಮುಂದಾಗಿ. ಶೀಘ್ರದಲ್ಲಿ ಕಾಮಗಾರಿಗಳು ಪೂರ್ಣಗೊಳಿಸಬೇಕು. ಕುಡಿವ ನೀರಿನ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.
    ಜೆಸ್ಕಾಂ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕು. ಹಲವು ಯೋಜನೆಗಳಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಸೌಕರ್ಯ ಕಲ್ಪಿಸಿ, ನೆಪ ಹೇಳುವುದು ಬಿಟ್ಟು ಕೆಲಸ ಮಾಡಿ. ವಿದ್ಯುತ್ ತಂತಿ ತಗುಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಿ. ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಹೇಳಿದರು.
    ಮುಲ್ಲಾಮಾರಿ ಯೋಜನಾಧಿಕಾರಿ ಮಾತನಾಡಿ, ಈಗಾಗಲೇ (0-50) ಕಿಮೀ. ಕಾಲುವೆಯಲ್ಲಿ 45 ಕಿಮೀ ಕಾಮಗಾರಿ ಪೂರ್ಣಗೊಂಡಿದೆ. 5 ಕಿಮೀ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ ಅಂತ್ಯದವರೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದರು.
    ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಸುತ್ತುಗೋಡೆ, ಶೌಚಗೃಹ, ಆಟದ ಮೈದಾನ, ತರಕಾರಿ ತೋಟ ಇತ್ಯಾದಿ ಬೆಳೆಸುವ ಮೂಲಕ ಶಾಲೆಗಳಲ್ಲಿ ಉತ್ತಮ ವಾತಾವರಣ ನಿರ್ಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts