More

    ನೇಕಾರರ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಆಗ್ರಹ

    ಚಿತ್ರದುರ್ಗ: ನೇಕಾರರ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಗೋವಿಂದಪ್ಪ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಸ್ಥಾಪಿಸಿದ್ದು, ಈವರೆಗೂ ಕಾರ್ಯಾರಂಭವಾಗದೆ, ನಿಷ್ಕ್ರಿಯ ಸ್ಥಿತಿಯಲ್ಲಿದೆ. ಅನುದಾನ ಬಿಡುಗಡೆಯೊಂದಿಗೆ ಆರಂಭಿಸಲು ಒತ್ತಾಯಿಸಿ, ಫೆಬ್ರವರಿಯಲ್ಲಿ ಬಾಗಲಕೋಟೆಯಲ್ಲಿ ನೇಕಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

    ರಾಜ್ಯದಲ್ಲಿ ನೇಕಾರ ಸಮುದಾಯ 60 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿ, ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    ಜಾತಿಗಣತಿ ಪೂರ್ಣಗೊಂಡಿದ್ದು, ಹಿಂದುಳಿದವರು, ಶೋಷಿತರಿಗೆ ನ್ಯಾಯ ಸಿಗಬೇಕಾದರೆ ವರದಿಯನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಬೇಕು. ಸಮಾವೇಶದಲ್ಲಿ ನೇಕಾರರ ಒಗ್ಗಟ್ಟು ಶಕ್ತಿ ಪ್ರದರ್ಶನದ ಅಗತ್ಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.

    ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್, ಸದಸ್ಯರಾದ ಎಚ್.ಮಮತಾ, ಹೊಂಬಕ್ಕ, ಎಸ್.ಟಿ.ರಘು, ರಾಘವೇಂದ್ರ, ಶಿವರುದ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts