More

    ನೇತ್ರ ಉಚಿತ ತಪಾಸಣಾ ಶಿಬಿರ ಪ್ರಯೋಜನ ಪಡೆಯಿರಿ

    ಕೆ.ಎಂ.ದೊಡ್ಡಿ: ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ಕ್ಷೇತ್ರದಾದ್ಯಂತ ನೇತ್ರ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗುತ್ತಿದೆ ಎಂದು ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ತಿಳಿಸಿದರು.

    ಶ್ರೀನಿಧಿಗೌಡ ಪ್ರತಿಷ್ಠಾನ ಮತ್ತು ಆದಿಚುಂಚನಗಿರಿ ಆಸ್ಪತ್ರೆ ಸಹಯೋಗದಲ್ಲಿ ಇಲ್ಲಿನ ಕೆ.ಶೆಟ್ಟಹಳ್ಳಿ ಬೊಮ್ಮಲಿಂಗೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

    ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಕ್ಷೇತ್ರದ ಪ್ರತಿ 2 ಗ್ರಾಪಂ ವ್ಯಾಪ್ತಿಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು. ನುರಿತ ವೈದ್ಯರು ಚಿಕಿತ್ಸೆ ನೀಡಲಿದ್ದು, ಇಂತಹ ಸೇವೆಗಳನ್ನು ತಾಲೂಕಿನ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    180 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆಗೆ ಒಳಗಾದರು. ಮುಖಂಡರಾದ ಕರಡಕೆರೆ ಹನುಮಂತೇಗೌಡ, ರೈತ ಮುಖಂಡ ಅಣ್ಣೂರು ಮಹೇಂದ್ರ, ತಾಪಂ ಮಾಜಿ ಸದಸ್ಯ ದೊಡ್ಡಣ್ಣಯ್ಯ, ಜೈಭೀಮ್ ದಲಿತ ಜಾಗೃತಿ ಸಮಿತಿಯ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ, ಯುವ ಮುಖಂಡರಾದ ರಘು ಬೋರೇಗೌಡ, ಜೆಸಿಬಿ ಶಿವಲಿಂಗ, ಸುಂದರ್ ಸೇರಿದಂತೆ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts