More

    ನೇಮಕಾತಿ ರ್ಯಾಲಿ ಆಯೋಜನೆ

    ಯಾದಗಿರಿ: ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಡಿಸೆಂಬರ್ ತಿಂಗಳಲ್ಲಿ ನೇಮಕಾತಿ ರ್ಯಾಲಿಯನ್ನು ಯಾದಗಿರಿಯಲ್ಲಿ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇಮಕಾತಿ ರ್ಯಾಲಿ ಹಿನ್ನೆಲೆಯಲ್ಲಿ ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಡಿ.04ರಿಂದ 15ರ ವರೆಗೆ ಭೂಸೇನಾ ನೇಮಕಾತಿ ರ್ಯಾಲಿ ನಗರದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಅಭ್ಯಥರ್ಿಗಳು ಆಗಮಿಸುತ್ತಾರೆ.ಅವರಿಗೆ ತೊಂದರೆಯಾಗದಂತೆ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

    ನೇಮಕಾತಿ ವಿಭಾಗದ ನಿರ್ದೇಶಕ ಕರ್ನಲ್ ನಿಶಾಂತ್ ಶೆಟ್ಟಿ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ರ್ಯಾಲಿ ಆಯೋಜಿಸಲಾಗುತ್ತಿದೆ. ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಬೀದರ್ ಹಾಗೂ ಯಾದಗಿರಿ ಹೀಗೆ ಒಟ್ಟು 6 ಜಿಲ್ಲೆಗಳ 9,521 ಅಬ್ಯರ್ಥಿಗಳು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಅವಶ್ಯಕತೆ ಇರುವ ಮೂಲಸೌಕರ್ಯಗಳು, ಸಲಕರಣೆಗಳು ಹಾಗೂ ಅವಶ್ಯಕ ಸಿಬ್ಬಂದಿ ನಿಯೋಜನೆಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts