More

    ನೇಮಕಾತಿ ವೇಳೆ ಸೇವಾ ಜ್ಯೇಷ್ಠತೆ ಪರಿಗಣಿಸಿ: ಅತಿಥಿ ಶಿಕ್ಷಕರ ಆಗ್ರಹ

    ಸೊರಬ: ಸೇವಾ ಭದ್ರತೆ ಹಾಗೂ ಕೃಪಾಂಕ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಿದರು.
    ರಾಜ್ಯ ಅಧ್ಯಕ್ಷ ಡಿ.ಎ.ಕೋಟೇಶ್ ಮಾತನಾಡಿ, ಸರ್ಕಾರ ನೇಮಕಾತಿ ವೇಳೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸೇವೆಯನ್ನು ಪರಿಗಣಿಸಿ ಮೊದಲ ಆದ್ಯತೆ ನೀಡಬೇಕು. ಸೇವ ಭದ್ರತೆ ಒದಗಿಸಿ ಪ್ರತಿವರ್ಷ ಶೇ.5 ಕೃಪಾಂಕ ನೀಡಬೇಕು. ಅತಿಥಿ ಶಿಕ್ಷಕರನ್ನು ನೇಮಕದ ವೇಳೆ ಸೇವಾ ಜ್ಯೇಷ್ಠತೆಯನ್ನು ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
    ಇಂದು ಸಾಂಕೇತಿಕವಾಗಿ ತಾಲೂಕಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ತಾಲೂಕಿನಲ್ಲಿ ಅತಿಥಿ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಈ ವಾರ ಪೂರ್ತಿ ಶಾಲೆಗೆ ಗೈರಾಗುವುದಾಗಿ ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts