More

    ನೇಹಾ ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು / ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು / ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಬೇಕು/ ಸಂಸದ ಮುನಿಸ್ವಾಮಿ ಆಗ್ರಹ

    ವಿಜಯವಾಣಿ ಸುದ್ದಿಜಾಲ ಕೋಲಾರ
    ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದ ಜಿಲ್ಲಾ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಆರೋಪಿಯನ್ನು ಗಲ್ಲಿಗೇರಿಸಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

    ನಗರದ ಹೊಸ ಬಸ್ ನಿಲ್ದಾಣದ ಬಳಿ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿದರು. ಹಿಂದೂ ವಿರೋಧಿ, ರಾಷ್ಟ್ರ ವಿರೋಧಿ ಹಾಗೂ ಮಹಿಳಾ ವಿರೋಧಿ ಸರ್ಕಾರ ಎಂದು ಘೋಷಣೆ ಹಾಕಿ ನ್ಯಾಯಕ್ಕಾಗಿ ಪಟ್ಟು ಹಿಡಿದರು.

    ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಹಾಡಹಗಲೇ ಕೊಲೆಗಳ ಮೇಲೆ ಕೊಲೆಗಳು ನಡೆಯುತ್ತಿವೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಏಜೆಂಟರAತೆ ವರ್ತಿಸುತ್ತಿದೆ. ರಾಜ್ಯದಲ್ಲಿ ಹಿಂದೂಗಳಿಗೆ, ರಾಮಭಕ್ತರಿಗೆ, ಸ್ಥಳೀಯರಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲವಾಗಿದೆ ಎಂದು ದೂರಿದರು.

    ನೇಹಾ ಕೊಲೆ ಮಾಡಿದ್ದು ಯಾರು? ಅದರ ಹಿಂದೆ ಪಾಕಿಸ್ತಾನದ ಯಾವ ಏಜೆಂಟರು ಇದ್ದಾರೆ ಎಂಬುದನ್ನು ಪತ್ತೆಹಚ್ಚಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

    ದೇಶಭಕ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿಸುತ್ತಿದೆ. ಮಹಿಳೆಯರು, ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಅವರಿಗೆಲ್ಲಾ ಚೊಂಬು ಕೊಟ್ಟಿದೆ ಎಂದು ಟೀಕಿಸಿದರು.

    ನಮ್ಮ ಹೋರಾಟ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲೀಸರು ಕಾಂಗ್ರೆಸ್ ಏಜೆಂಟರAತೆ, ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

    ವೈಯಕ್ತಿಕ ಘಟನೆ ಎಂಬ ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಅವರು, ಇಂದಿರಾ ಗಾಂಧಿ ಕೊಲೆಗೆ ವೈಯಕ್ತಿಕ ಕಾರಣವೇ? ರಾಜೀವ್ ಗಾಂಧಿ ಕೊಲೆಗೆ ವೈಯಕ್ತಿಕ ಕಾರಣವೇ ಎಂದು ಪ್ರಶ್ನಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ವೈಯಕ್ತಿಕ ವಿಚಾರ ಎಂಬುದಾಗಿ ಕ್ಷುಲ್ಲಕ ಹಾಗೂ ಬೇವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಪಾಕಿಸ್ತಾನ ಏಜೆಂಟರAತೆ ವರ್ತಿಸುತ್ತಿವೆ ಎಂದು ಆರೋಪಿಸಿದರು.

    ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಿಮೆಂಟ್ ಮಂಜು ಮಾತನಾಡಿ, ಕಾಂಗ್ರೆಸ್ ಸರ್ಕಾರ ಕೊಲೆಗಳನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಮಹಿಳೆಯರನ್ನು ಬೀದಿಯಲ್ಲಿ ಕೊಲೆ ಮಾಡುವ ಸಮುದಾಯದ ಪರ ನಿಲ್ಲುತ್ತಿದೆ. ರಾಜ್ಯ ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಟೀಕಿಸಿದರು.

    ರಾಜ್ಯದ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಮನೆಯಿಂದ ಹೊರಹೋಗುವ ಹೆಣ್ಣು ಮಕ್ಕಳು ನೆಮ್ಮದಿಯಾಗಿ ಮನೆಗೆ ಬಂದು ಸೇರುವ ವಾತಾವರಣ ಇಲ್ಲವಾಗಿದೆ. ಮಹಿಳೆಯರಿಗೆ ಭದ್ರತೆ ನೀಡದ ಸರ್ಕಾರ ಈ ರಾಜ್ಯದಲ್ಲಿ ಇರಕೂಡದು. ಹೀಗಾಗಿ, ನರೇಂದ್ರ ಮೋದಿ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಮನವಿ ಮಾಡಿದರು.

    ಸಾವಿನ ಮನೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ, ನಾವು ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿಲ್ಲ. ಬದಲಾಗಿ ನೊಂದವರಿಗೆ ಸಾಂತ್ವನ ಹೇಳುತ್ತಿದ್ದೇವೆ. ಒಬ್ಬ ಕಾರ್ಪೊರೇಟ್ ಕುಟುಂಬಕ್ಕೆ ಭದ್ರತೆ ಇಲ್ಲವೆಂದರೆ ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕರಾದ ಮಂಜುನಾಥ್ ಗೌಡ, ವೈ.ಸಂಪAಗಿ, ಎಂ.ನಾರಾಯಣಸ್ವಾಮಿ, ಮುಖಂಡ ಎಸ್.ಬಿ.ಮುನಿವೆಂಕಟಪ್ಪ, ಸೀಗೇಹಳ್ಳಿ ಸುಂದರ್, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ, ಮಮತಮ್ಮ, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಇದ್ದರು.

    ಚಿತ್ರ ೨೨ ಕೆ.ಎಲ್.ಆರ್. ೦೭ : ನೇಹಾ ಹತ್ಯೆ ಖಂಡಿಸಿ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಕೋಲಾರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ನೇಹಾ ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು / ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು / ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಬೇಕು/ ಸಂಸದ ಮುನಿಸ್ವಾಮಿ ಆಗ್ರಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts