More

    ನೇಹಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ

    ಚಿತ್ರದುರ್ಗ: ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಕಾರ‌್ಯಕರ್ತರು ನಗರದ ವೀರ ವನಿತೆ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
    ಹಾಡಹಗಲೇ ನಡೆದ ಈ ಕೃತ್ಯದಿಂದಾಗಿ ರಾಜ್ಯದ ವಿದ್ಯಾರ್ಥಿ ಸಮುದಾಯ ಬೆಚ್ಚಿಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಕಾಲೇಜು ಆವರಣದೊಳಗೆ ಹತ್ಯೆ ಎಸಗಿರುವ ಆರೋಪಿಗೆ, ಕಾನೂನಿನ ಯಾವುದೇ ಭಯವೂ ಇಲ್ಲವಾಗಿದ್ದು, ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ದೂರಿದರು.
    ಪೊಲೀಸರು ಸೂಕ್ತ ತನಿಖೆ ನಡೆಸಿ, ಪ್ರಕರಣದ ಆರೋಪಿ ಎಸಗಿರುವ ಅಪರಾಧಕ್ಕೆ ಕಠಿಣ ಶಿಕ್ಷೆ ಕೊಡಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
    ರಾಜ್ಯಾದ್ಯಂತ ಪೊಲೀಸರು ಮಫ್ತಿಯಲ್ಲಿ ಶಾಲಾ ಕಾಲೇಜುಗಳ ಬಳಿ ಕರ್ತವ್ಯ ನಿರ್ವಹಿಸುವ ಮೂಲಕ ಸಂಭಾವ್ಯ ಘಟನೆಗಳನ್ನು ನಿಯಂತ್ರಿಸಬೇಕು. ಶಾಲಾ, ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು. ಜತೆಗೆ ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
    ಪರಿಷತ್ ರಾಜ್ಯ ಕಾರ‌್ಯಕಾರಿಣಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ಗೋಪಿ, ಚೈತ್ರಾ, ದರ್ಶನ್, ಸುಮನ್, ಚಿತ್ರಸ್ವಾಮಿ, ಸುದೀಪ್, ಸಂಜನಾ, ಯುವರಾಜ್, ದಾನೇಶ್, ಸುಮಾ, ಚಂದನಾ, ತಿಪ್ಪೇಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts