More

    ನೇಹಾ ಮಾದರಿಯ ಹತ್ಯೆ ಪ್ರಕರಣ; ಆರೋಪಿ ವಿಶ್ವ ಸಿಕ್ಕಿಬಿದ್ದಿದ್ದೆ ರಣರೋಚಕ

    ಹುಬ್ಬಳ್ಳಿ: ಮೇ 15ರಂದು ಇಲ್ಲಿನ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ (20) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ನನ್ನು ಬಂಧಿಸಿದ್ದು, ಈತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದೆ ಬಲು ರೋಚಕವಾಗಿದೆ.

    ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಬಳಿಕ ರೈಲು ಹತ್ತಿದ್ದಾನೆ. ಈ ವೇಳೆ ರೈಲಿನಲ್ಲಿ ಮಹಿಳೆಯೊಬ್ಬರ ಜೊತೆ ಆರೋಪಿ ಕಿರಿಕ್​ ತೆಗೆದಿದ್ದು, ಸಿಟ್ಟಿನಿಂದ ಅವರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದನ್ನು ನೋಡಿದ ಸಹ ಪ್ರಯಾಣಿಕರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಟ್ಟಿದೆ. ರೈಲ್ವೇ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಗೊಂಡಿರುವ ಆರೋಪಿ ವಿಶ್ವನನ್ನು ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

    ದೂರು ನೀಡಿದ ಮಹಿಳೆ: ಚಾಕು ಇರಿತದಿಂದ ಗಾಯಗೊಂಡ ಮಹಿಳೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾತಿ ಚಿಕಿತ್ಸೆ ಪಡೆದಿದ್ದಾರೆ. ಶುಕ್ರವಾರ ಬೆಳಗ್ಗೆ ರೈಲ್ವೆ ಪೊಲೀಸರಿಗೆ ಗಿರೀಶನ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts