More

    ನೇಹಾ ಹತ್ಯೆ ಕೇಸ್ ಸಿಬಿಐಗೆ ವಹಿಸಿ

    ಔರಾದ್: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ದುಷ್ಕರ್ಮಿ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರ‍್ಯಾಕಲೆ ಆಗ್ರಹಿಸಿದರು.

    ಪಟ್ಟಣದ ಇಕ್ರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗುರುವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿ, ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಕ್ಯಾಂಪಸ್‌ನಲ್ಲೇ ನೇಹಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದಿದೆ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆಯೇ ಸಾಕ್ಷಿ. ಕಾನೂನಿನ ಭಯ ಇಲ್ಲದಿದ್ದರೆ ಮಾತ್ರ ಇಂಥ ಘಟನೆಗಳು ನಡೆಯಲು ಸಾಧ್ಯ. ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

    ನೇಹಾ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರದ ಹಿಡಿತದಲ್ಲಿರುವ ಸಿಐಡಿಗೆ ವಹಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವುದು ಕಂಡುಬರುತ್ತಿದೆ. ಕೊಲೆಗೈದ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ. ಸಂಗ್ರಹಿಸಿದ ಸಹಿಗಳನ್ನು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

    ಪ್ರಾಂಶುಪಾಲ ಗಾಜಿ ಅಲಿ ಬೇಗ್, ಹೇಮಂತ್, ರಾಹುಲ್, ಮಲ್ಲಿಕಾರ್ಜುನ, ಅನೀಲ ಮೇತ್ರೆ, ನಾಗಮ್ಮ, ಪೂಜಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts