More

    ನೊಂದವರಿಗೆ ನ್ಯಾಯ ಒದಗಿಸಿ


    ಯಾದಗಿರಿ: ಅನುಸೂಚಿತ ಜಾತಿ ಹಾಗೂ ಪಂಗಡಗಳ ನೊಂದ ಸಂತ್ರಸ್ತರಿಗೆ ಸಕಾಲಕ್ಕೆ ಪರಿಹಾರ ದೊರೆಯಲು ಅನುಕೂಲವಾಗುವಂತೆ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಈ ಜನಾಂಗದ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಗಬಹುದಾದ ಪರಿಹಾರೋಪಾಯಗಳು, ಕಾಯ್ದೆದೆ ಕುರಿತು ಅರಿವು ಸೇರಿ ಅಸ್ಪಶ್ಯತೆ ನಿವಾರಣೆ ಕುರಿತು ಸೂಕ್ತ ಜಾಗೃತಿ ಮೂಡಿಸಬೇಕು ಎಂದರು.

    ಈ ಜನಾಂಗಕ್ಕೆ ಇರುವ ಕಲ್ಯಾಣ ಕಾರ್ಯಕ್ರಮಗಳು ಸಕಾಲಕ್ಕೆ ತಲುಪಿಸಬೇಕು. ಭೂ ಒಡೆತನ ಯೋಜನೆ, ಸ್ಮಶಾನ ಅಭಿವೃದ್ಧಿ ಕಾರ್ಯಕ್ರಮ, ಗಂಗಾ ಕಲ್ಯಾಣ ಯೋಜನೆಯಡಿ, ಸೌಲಭ್ಯಗಳು ಸೇರಿ ಅವರ ಕುಂದುಕೊರತೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು. ನೊಂದ ಸಂತ್ರಸ್ತರಿಗೆ ಪರಿಹಾರ ಅನುದಾನ ಅದ್ಯತೆ ಮೇಲೆ ಒದಗಿಸುವಂತೆ ತಿಳಿಸಿದ ಅವರು, ಎಲ್ಲ ಇಲಾಖೆವಾರು, ನಿಗಮವಾರು, ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಕಲ್ಪಿಸಲು ನಿದರ್ೇಶನ ನೀಡಿದರು.

    ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಅನುದಾನ ಶೇ.100ರಷ್ಟು ಬಳಸಿ ಬರುವ ಮಾಚರ್್ ಅಂತ್ಯದೊಳಗೆ ಗುರಿಗೆ ತಕ್ಕಂತೆ ಆಥರ್ಿಕ ಮತ್ತು ಭೌತಿಕ ಪ್ರಗತಿ ಸಾಧಿಸಬೇಕು, ನಿಗಧಿಪಡಿಸಿ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿ ಪ್ರಗತಿ ಸಾಧಿಸಬೇಕು. ಯಾವುದೇ ಕಾಮಕಾರಿ ಬಾಕಿ ಉಳಿಯಂತೆ ನಿಗಾವಹಿಸಬೇಕು. ಸಭೆಗಳನ್ನು ನಡೆಸಿ ಕುಂದುಕೊರತೆಗಳಿಗೆ ಪರಿಹಾರ ಒದಗಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts