More

    ನೊಂದವರಿಗೆ ನ್ಯಾಯ ಒದಗಿಸಿಕೊಡಿ

    ಕಾಗವಾಡ: ಸಮಾಜದ ಸ್ವಾಸ್ಥೃ ಕಾಪಾಡುವಲ್ಲಿ ನ್ಯಾಯವಾದಿಗಳ ಪಾತ್ರ ಪ್ರಮುಖವಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹಾಗೂ ಬೆಳಗಾವಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಅರವಿಂದಕುಮಾರ ಹೇಳಿದ್ದಾರೆ.

    ಭಾನುವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಸಿವಿಲ್ ಜಡ್ಜ್ ಮತ್ತು ಜೆಎಂಎ್ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದರು. ಕಾಗವಾಡದಲ್ಲಿ ನೂತನ ನ್ಯಾಯಾಲಯ ಪ್ರಾರಂಭವಾಗಿರುವುದರಿಂದ ಈ ಭಾಗದ ನ್ಯಾಯವಾದಿಗಳ ಜವಾಬ್ದಾರಿ ಹೆಚ್ಚಾಗಿದೆ ಎಂದ ಅವರು, ಬಡ ಜನರಿಗೆ ಕಾನೂನಿನ ಅರಿವು ಮೂಡಿಸುವುದಕ್ಕೆ ತಿಂಗಳಿಗೊಮ್ಮೆ 5 ನ್ಯಾಯವಾದಿಗಳು ಸೇರಿಕೊಂಡು ಪ್ರತಿ ಗ್ರಾಮಗಳಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ರಾಜ್ಯದಲ್ಲಿ ಹಲವಾರು ಪಟ್ಟಣಗಳು ತಾಲೂಕು ಕೇಂದ್ರಗಳಾಗಿ ಮಾರ್ಪಟ್ಟಿವೆ. ಆದರೆ, ಇನ್ನೂ ಕೆಲ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆಯಾಗಿಲ್ಲ. ಈ ಕುರಿತು ಗಮನಹರಿಸಲಾಗುವುದು ಎಂದರು.

    ಹೈಕೋರ್ಟ್ ನ್ಯಾಯಾಧೀಶ ಸಚಿನ ಮಗದುಮ್ಮ, ಬಾರ್ ಕೌನ್ಸಿಲ್ ಉಪಾಧ್ಯಕ್ಷ ಕಲ್ಮೇಶ ಕಿವಡ, ಬಾರ್ ಕೌನ್ಸಿಲ್ ಸದಸ್ಯರಾದ ಕೆ.ಬಿ.ನಾಯಿಕ, ವಿನಯ ಮಾಂಗಲೇಕರ, ಚಿಕ್ಕೋಡಿ ಎಸಿ ಯುಕೇಶಕುಮಾರ, ಕಾಗವಾಡದ ನೂತನ ನ್ಯಾಯಾಧೀಶ ಚನ್ನಬಸಪ್ಪ ಕೋಡಿ, ಶ್ರೀನಿವಾಸ ಪಾಟೀಲ, ಅಭಯಕುಮಾರ ಅಕಿವಾಟೆ, ಕಾಗವಾಡ ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ, ಸಿಪಿಐ ಶಂಕರಗೌಡ ಬಸನಗೌಡರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶೀತಲಗೌಡ ಪಾಟೀಲ, ಕೆಎಂಎ್ ನಿರ್ದೇಶಕ ಅಪ್ಪಾಸಾಬ ಅವತಾಡೆ, ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತ ವಿ.ಎನ್. ಪಾಟೀಲ, ಕಾಗವಾಡ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ. ಪಾಟೀಲ, ಉಪಾಧ್ಯಕ್ಷ ಎ.ಬಿ. ಭಂಡಾರೆ, ಕಾರ್ಯದರ್ಶಿ ಸಿ.ಎಸ್. ಮಠಪತಿ, ಪ್ರೊ. ಜೆ.ಕೆ. ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts