More

    ನೋಂದಾಯಿತ 32,346ರ ಪೈಕಿ 1,006 ವಿದ್ಯಾರ್ಥಿಗಳು ಗೈರು!

    ಬೆಳಗಾವಿ: ಚಿಕ್ಕೋಡಿ ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 271 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ಜರುಗಿತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಪ್ರಥಮ ಭಾಷೆ (ಕನ್ನಡ, ಮರಾಠಿ, ಉರ್ದು, ಹಿಂದಿ) ಪರೀಕ್ಷೆ ಬರೆದರು. ಪರೀಕ್ಷೆಗೆ ಹಾಜರಾದವರಲ್ಲಿ 275 ಪುನರಾವರ್ತಿತ ವಿದ್ಯಾರ್ಥಿಗಳು, 320 ಖಾಸಗಿ ವಿದ್ಯಾರ್ಥಿಗಳು, 47 ಪುನರಾವರ್ತಿತ ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. 536 ವಿದ್ಯಾರ್ಥಿಗಳು ಗೈರಾದರು. ಈ ಪೈಕಿ 22 ಪುನರಾವರ್ತಿತ ವಿದ್ಯಾರ್ಥಿಗಳು, 47 ಖಾಸಗಿ ವಿದ್ಯಾರ್ಥಿಗಳು, 320 ಪುನರಾವರ್ತಿತ ಖಾಸಗಿ ವಿದ್ಯಾರ್ಥಿಗಳು ಗೈರಾದರು.

    ಅದೇ ರೀತಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 43,525 ವಿದ್ಯಾರ್ಥಿಗಳಲ್ಲಿ 43,151 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಅದರಲ್ಲಿ 315 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು 374 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು. ಗೈರಾದವರಲ್ಲಿ 25 ಪುನರಾವರ್ತಿತ ವಿದ್ಯಾರ್ಥಿಗಳೂ ಇದ್ದಾರೆ. ಅಲ್ಲದೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 432 ಖಾಸಗಿ ವಿದ್ಯಾರ್ಥಿಗಳ ಪೈಕಿ 336 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 96 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನಕಲು ತಡೆಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿಯೊಂದು ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಮೂಲ ಸೌಲಭ್ಯಗಳೊಂದಿಗೆ ಬೆಳಗಾವಿಯಲ್ಲಿ 120 ಹಾಗೂ ಚಿಕ್ಕೋಡಿ ಜಿಲ್ಲೆಯಲ್ಲಿ 151 ಸೇರಿ ಒಟ್ಟು 271 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು. ಎರಡೂ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವ ವಿದ್ಯಾರ್ಥಿಗಳು ಡಿಬಾರ್ ಆದ ಬಗ್ಗೆ ವರದಿಯಾಗಿಲ್ಲ. ಯಾವುದೇ ಅಹಿತಕರ ಘಟನೆಗಳಾಗದಂತೆ ಪರೀಕ್ಷೆ ಶಾಂತಿಯುತವಾಗಿ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts