More

    ನ್ಯಾಯಬೆಲೆ ಅಂಗಡಿಯಲ್ಲಿ ಮೋಸ

    ಚೇಳೂರು : ಬಿಪಿಎಲ್ ಕಾರ್ಡ್‌ದಾರರಿಗೆ ತೂಕದಲ್ಲಿ ಮೋಸ ಹಾಗೂ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವೆಂಕಟಾಪುರಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

    ಬಾಗೇಪಲ್ಲಿ ತಾಲೂಕು ಚೇಳೂರು ಹೋಬಳಿಯ ವೆಂಕಟಾಪುರದ ನ್ಯಾಯಬೆಲೆ ಅಂಗಡಿಯಲ್ಲಿ 4 ಜನ ಇರುವ ಕುಟುಂಬಕ್ಕೆ 40 ಕೆಜಿ ಬದಲು 38 ಕೆಜಿ ಅಕ್ಕಿ ನೀಡುತ್ತಿದ್ದು, 5 ಜನ ಇರುವವರಿಗೆ 40 ಕೆ.ಜಿ ಅಕ್ಕಿ ನೀಡುತ್ತಿದ್ದು ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದಾರೆ. ಇದರ ಜತೆಗೆ ಪ್ರತಿ ಪಡಿತರದಾರರಿಂದ 10 ರೂ. ವಸೂಲು ಮಾಡುತ್ತಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಮಾಲೀಕನಿಗೆ ತಿಳಿಸಿದರೂ ಪ್ರಯೋಜನವಾಗದ ಕಾರಣ ತಹಸೀಲ್ದಾರ್ ಗಮನಕ್ಕೆ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಚೇಳೂರು ಹೋಬಳಿ ಕಂದಾಯ ಇನ್‌ಸ್ಪೆಕ್ಟರ್ ಚಂದ್ರಶೇಖರರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರೀಕ್ಷಕ ಸೂರ್ಯನಾರಾಯಣ, ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿ ಎನ್.ರಮಾನಂದ್, ವೈ.ವೆಂಕಟೇಶ್‌ರವರು ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಬಡವರಿಗೆ ನೀಡುತ್ತಿರುವ ಆಹಾರ ಧಾನ್ಯಗಳನ್ನು ಸರಿಯಾದ ಸಮಯಕ್ಕೆ ವಿತರಣೆ ಮಾಡದೆ ಅದರಲ್ಲೂ ತೂಕ ಕಡಿಮೆ ಮಾಡಿ ನೀಡುತ್ತಿರುವ ಬಗ್ಗೆ ಕ್ರಮ ಜರುಗಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

    ವೆಂಕಟಾಪುರ ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಪರಿಶೀಲಿಸಿದ್ದು, ಆಹಾರ ವಿತರಣೆಯಲ್ಲಿ ಮೋಸ ಮಾಡುತ್ತಿರುವುದು ಸಾಬೀತಾಗಿದೆ. ಪರಿಶೀಲಿಸಿ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅವರು ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಾಗಿದೆ.
    ಸೂರ್ಯನಾರಾಯಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀರೀಕ್ಷಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts