More

    ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

    ಹುಬ್ಬಳ್ಳಿ: ಪಾಕ್ ಪರ ಘೊಷಣೆ ಕೂಗಿದ ಆರೋಪದಡಿ ಬೆಳಗಾವಿ ಹಿಂಡಲಗಾ ಜೈಲು ಸೇರಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 13ರವರೆಗೆ ವಿಸ್ತರಿಸಿ 2ನೇ ಜೆಎಂಎಫ್​ಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.

    ಮಾ. 2ಕ್ಕೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿತ್ತು. ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಾ.13ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ನ್ಯಾಯಾಧೀಶ ವಿಶ್ವನಾಥ ಮುಗತಿ ಆದೇಶಿಸಿದರು.

    ತಕರಾರು ಅರ್ಜಿಗೆ ಕಾಲಾವಕಾಶ: ಆರೋಪಿಗಳ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ತಕರಾರು ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಕೋರಿ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಅಂಚಟಗೇರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ ಕೆ.ಎನ್. ಗಂಗಾಧರ ಅವರು ಮಾ. 5ರವರೆಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts