More

    ನ್ಯಾಯಾಂಗ ವ್ಯವಸ್ಥೆ ಸುಧಾರಿಸಲು ಬದ್ದರಾಗೋಣ

    ಯಾದಗಿರಿ: ನ್ಯಾಯಾಂಗ ವ್ಯವಸ್ಥೆ ಸುಧಾರಿಸಲು ಬದ್ದರಾಗೋಣ ಉನ್ನತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವರು ಸಕಾಲಕ್ಕೆ ನ್ಯಾಯದಾನದ ಪ್ರಕರಣಗಳನ್ನು ಇತ್ಯರ್ಥಪಡಿಸಿ ಶ್ರೀಸಾಮಾನ್ಯನ ಸಮಸ್ಯಗೆ ನೆರವಾಗುವ ಜತೆಗೆ ನ್ಯಾಯಾಂಗ ವ್ಯವಸ್ಥೆ ಸುಧಾರಿಸಲು ಬದ್ದರಾಗೋಣ ಎಂದು ಹೈಕೋರ್ಟ್ ನ್ಯಾಯಮೂರ್ತಿಪ್ರಸನ್ನ ಬಿ.ವರಾಳೆ ಕರೆ ನೀಡಿದರು.


    ಶನಿವಾರ ನಗರದ ಜಿಲ್ಲಾಡಳಿತ ಭವನದ ಹಿಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಕಟ್ಟಡದ ಕಾಮಗಾರಿ ಪರಿಶೀಲಿಸಿದ ನಂತರ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನ್ಯಾಯ ಕೋರಿ ಬರುವ ಸಾರ್ವಜನಿಕರಿಗೆ ಸಕಾಲಕ್ಕೆ ಪರಿಹಾರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ನ್ಯಾಯಾಲಯ ಸುಸಜ್ಜಿತ ಕಟ್ಟಡಕ್ಕೆ ಮೂಲ ಸೌಕರ್ಯಗಳು ಇದ್ದಲ್ಲಿ, ಸಕಾಲದಲ್ಲಿ ನ್ಯಾಯ ಒದಗಿಸಲು ಸಹಕಾರಿಯಾಗಲಿದೆ. ನಗರದಲ್ಲಿ ಸುಸಜ್ಜಿತ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುತ್ತಿದೆ. ಬಾರ್ ಅಸೋಸಿಯೇಶನ್ ಕಟ್ಟಡಕ್ಕೂ ಅವಶ್ಯಕ ಮೂಲ ಸೌಕರ್ಯ ಒದಗಿಸಲು ಲೋಕೋಪಯೋಗಿ ಇಲಾಖೆ ಅಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    ನ್ಯಾಯಾಲಯದ ರಜಿಸ್ಟಾರ್ ಜನರಲ್ ಮುರಳಿಧರ್, ರಜಿಸ್ಟಾರ್ ವಿಜಿಲನ್ಸ್, ಕೆ.ಎಸ್. ಭರತ ಕುಮಾರ, ಜೆ.ಸ್ವಾಮಿ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಶ ನಂದಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts