More

    ನ.19 ರಿಂದ 21ರವರೆಗೆ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’

    ಬೆಂಗಳೂರು:

    ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐ.ಟಿ. ಬಿ.ಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು 23ನೇ ಆವೃತ್ತಿಯ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ‘ಯನ್ನು (ಬಿಟಿಎಸ್) ನ.19 ರಿಂದ 21ರವರೆಗೆ ನಡೆಸಲು ಸಿದ್ಧತೆ ನಡೆಸಿದೆ.
    ಈ ಡಿಜಿಟಲ್ ಸಮಾವೇಶವು ವಿವಿಧ ಕ್ಷೇತ್ರಗಳಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ ಇತ್ತೀಚಿನ ಸಂಶೋಧನೆಗಳು ಮತ್ತು ಸಂವಾದಗಳ ಬಗ್ಗೆ ಬೆಳಕು ಚೆಲ್ಲಲಿದೆ. ‘ಭವಿಷ್ಯ ಈಗಲೇ’ (ನೆಕ್ಸಸ್ಟ್ ಈಸ್ ನೌ) ಈ ಬಾರಿಯ ಶೃಂಗಸಭೆಯ ಆಶಯವಾಗಿದೆ. ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುವ ದೇಶದ ಏಕೈಕ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಇದಾಗಿದೆ.
    ರಾಜ್ಯದಲ್ಲಿನ ಎಲ್ಲ ಕಾಲೇಜುಗಳ ಪದವಿಪೂರ್ವ ವಿದ್ಯಾರ್ಥಿಗಳು ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ತಮ್ಮದೇ ಸಾಧನಗಳಲ್ಲಿ ಆನ್‌ಲೈನ್ ಕ್ವಿಜ್‌ನಲ್ಲಿ ಭಾಗವಹಿಸಲು (ಣಣಠಿ://ಟಿಣ.ಞಟಟಚಿಟಡಿ.ಛಿ/2020 ) ಅಂತರ್ಜಾಲ ತಾಣದಲ್ಲಿ ತಮ್ಮ ಹೆಸರನ್ನು ದಾಖಲಿಸಬಹುದು. ನೋಂದಣಿಯು ಅ.28ರಿಂದ ಆರಂಭಗೊಳ್ಳಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts