More

    ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಉಚ್ಛಾಟನೆ

    ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ನಾವೆಲ್ಲ ಹೆಜ್ಜೆ ಹಾಕಿ ಯಶಸ್ವಿಗೊಳಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಭಾರತ್ ಜೋಡೋ ಯಾತ್ರೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಘಟಕಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಭಾರತ ಜೋಡೋ ಯಾತ್ರೆ ತಮಿಳುನಾಡು, ಕೇರಳದಲ್ಲಿ ಯಶಸ್ಸು ಕಂಡಿದೆ. ಸೆ.30ರಿಂದ ಅ.27ರವರೆಗೆ ರಾಜ್ಯದಲ್ಲಿ ಯಾತ್ರೆ ನಡೆಯಲಿದೆ. ಜಿಲ್ಲೆಯ 18 ಮತಕ್ಷೇತ್ರಗಳಲ್ಲಿರುವ ಕಾರ್ಯಕರ್ತರು ಮೂರು ವಿಭಾಗಗಳಾಗಿ ಅದರಲ್ಲಿ ಭಾಗವಹಿಸಬೇಕು. ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಮೊಳಕಾಲ್ಮೂರು ಕ್ಷೇತ್ರದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಉತ್ಸಾಹದಿಂದ ಹೆಜ್ಜೆ ಹಾಕಬೇಕು ಎಂದರು.

    2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರಲು ತಯಾರಿ ನಡೆದಿದೆ. ಹಾಗಾಗಿ, ಎಲ್ಲ ಘಟಕಗಳ ಪದಾಧಿಕಾರಿಗಳು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಯಾರಾದರೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ತಕ್ಷಣ ಉಚ್ಛಾಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಲ್ಪನಾ ಜೋಶಿ ಅಧಿಕಾರ ವಹಿಸಿಕೊಂಡರು. ಕಾಂಗ್ರೆಸ್ ಮುಖಂಡ ವೀರಕುಮಾರ ಪಾಟೀಲ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ ಹನುಮಣ್ಣವರ, ಮಹಾವೀರ ಮೋಹಿತೆ, ಎಸ್.ಎಫ್.ಜಕ್ಕಪ್ಪನವರ, ಗಜಾನನ ಮಂಗಸೂಳಿ, ಸದಾಶಿವ ಬುಟಾಳಿ, ಸುನೀಲ ಸಂಕ, ರಮೇಶ ಕುಡಚಿ, ಪ್ರದೀಪ್ ಎಂ.ಜೆ., ಕಿರಣ ಸಾಧುನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts