More

    ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ

    ಯಾದಗಿರಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಕಾರ್ಯಕರ್ತರು ಜಿಲ್ಲಾದ್ಯಂತ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗುವಂತೆ ವಿಜಯ ಸಂಕಲ್ಪ ರಥಯಾತ್ರೆ ರಾಜ್ಯ ಸಹಸಂಚಾಲಕ ಅಮರನಾಥ ಪಾಟೀಲ್ ಸಲಹೆ ನೀಡಿದರು.

    ನಗರದ ಎಸ್ಡಿಎನ್ ಸಭಾಂಗಣದಲ್ಲಿ ಗುರುವಾರ ವಿಜಯ ಸಂಕಲ್ಪ ರಥಯಾತ್ರೆ, ಮೋಚರ್ಾಗಳ ಸಮಾವೇಶಗಳ ನಿಮಿತ್ತ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಮುಂದಿಟ್ಟುಕೊಂಡು ರಥಯಾತ್ರೆ ಆಯೋಜಿಸಲಾಗಿದೆ. ಅಲ್ಲದೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಈ ನಿಟ್ಟಿನಲ್ಲಿ ನಮ್ಮೆಲ್ಲ ಮುಖಂಡರು ಮತ್ತು ಕಾರ್ಯಕರ್ತರು ಬರುವ ಮೂರು ತಿಂಗಳು ಹೆಚ್ಚಿನ ಶ್ರಮ ಹಾಕುವುದು ಅತ್ಯವಶ್ಯವಾಗಿದೆ ಎಂದರು.

    ಈಗಾಗಲೇ ಬೂತ್ ವಿಜಯ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ ಯಶಸ್ವಿಯಾಗಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮತದಾರರನ್ನು ಸಂಪರ್ಕ ಮಾಡುವುದು ಹಾಗೂ ಕಾರ್ಯಕರ್ತರು ಬೂತ್ ಸಮಿತಿಯಲ್ಲಿ ಮತ್ತು ಶಕ್ತಿ ಕೇಂದ್ರಗಳ ವ್ಯಾಪ್ತಿಯಲ್ಲಿನ ಮತದಾರರಿಗೆ ಡಬ್ಬಲ್ ಇಂಜಿನ್ ಸರ್ಕಾರದ ಯೋಜನೆಗಳ ಕರಪತ್ರಗಳನ್ನು ತಲುಪಿಸಿ, ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

    ಕಾಂಗ್ರೆಸ್ನವರು ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ. ಮುಂಗಡ ಪತ್ರದಲ್ಲಿನ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡುವುದು ನಮ್ಮ ಪ್ರಮುಖ ಉದ್ದೇಶವಾಗಬೇಕು ಎಂದು ಕಿವಿಮಾತು ಹೇಳಿದರು.

    ಸಭೆ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್, ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪದಾಕಾರಿಗಳು ನಿರಂತವಾಗಿ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಂಡು ಸಭೆ, ಸಮಾವೇಶಗಳನ್ನು ಯಶಸ್ವಿಗೊಳಿಸಲು ಸಂಘಟನೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ರಾಜ್ಯದಿಂದ ಬರುವ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts