More

    ಪಕ್ಷ ಸೇರ್ಪಡೆಯಿಂದ ಗೆಲುವಿಗೆ ಮತ್ತಷ್ಟು ಶಕ್ತಿ ಬಂದಿದೆ

    ಹನೂರು: ಇತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್‌ನತ್ತ ಒಲವು ತೋರಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಶಾಸಕ ಆರ್.ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಇಂದಿರಾಗಾಂಧಿ ಅವರ ಕಾಲದಿಂದಲೂ ಇಂದಿನವರೆಗೂ ಉತ್ತಮ ಆಡಳಿತವನ್ನು ನೀಡಿದ್ದು, ಜನರ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜೀತ ಪದ್ಧತಿ ನಿರ್ಮೂಲನೆ, 20 ಅಂಶಗಳ ಕಾರ್ಯಕ್ರಮ, ಉಳುವವನೇ ಭೂ ಒಡೆಯ ಹಾಗೂ ನರೇಗಾ ಯೋಜನೆ ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮಗಳು ಬಡವರು, ಕೃಷಿಕರು, ಹಿಂದುಳಿದ ವರ್ಗ ಹಾಗೂ ದೀನ ದಲಿತರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.

    ಸಿದ್ದರಾಮಯ್ಯ ನೇತೃತ್ವದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಹೊಸ ಯೋಜನೆಗಳ ಅನುಷ್ಠಾನದ ಮೂಲಕ ಅಭಿವೃದ್ಧಿಯ ಪರ್ವವೇ ನಡೆದಿದೆ. ಹನೂರು ಕ್ಷೇತ್ರದಲ್ಲಿ ಸಾಕಷ್ಟು ಶಾಶ್ವತ ಯೋಜನೆಗಳು ಅನುಷ್ಠಾನಗೊಂಡಿವೆ. ಇದು ಕಾಂಗ್ರೆಸ್‌ನಿಂದ ಸಾಧ್ಯವಾಯಿತು. ಹಾಗಾಗಿ ಕಾಂಗ್ರೆಸ್ ಬಡವರು ಹಾಗೂ ಜನಪರವಾದ ಪಕ್ಷ. ಈಗಾಗಲೇ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನತೆ ಕಾಂಗ್ರೆಸ್‌ಗೆ ಒಲವನ್ನು ತೋರುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ದಿಸೆಯಲ್ಲಿ ಕ್ಷೇತ್ರದಲ್ಲಿ ಇತರ ಪಕ್ಷದಿಂದ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದು, ಗೆಲುವಿನ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು.

    ಕೂಡಲೂರು ಗ್ರಾಮದ ಬಿಜೆಪಿ ಮುಖಂಡರಾದ ಸಿದ್ದಪ್ಪ, ಮಾದಪ್ಪ, ಬೆಟ್ಟಪ್ಪ, ಮಾದೇವನಾಯ್ಕ, ಮಹೇಶ್, ಕರಿಯಪ್ಪನಾಯ್ಕ, ರಾಚಪ್ಪನಾಯ್ಕ, ಕೆಂಪರಸಪ್ಪ, ಮಂಟೆಸ್ವಾಮಿ, ಭೈರನತ್ತ ಗ್ರಾಮದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಾದ ದೊಡ್ಡಮಾದಯ್ಯ, ಸಿದ್ದರಾಜು, ಸಿದ್ದಪ್ಪ, ನಿಂಗಪ್ಪ ಹಾಗೂ ಚಾಮರಾಜು ಕಾಂಗ್ರೆಸ್ ಸೇರ್ಪಡೆಯಾದರು.
    ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಟಿಎಪಿಸಿಎಂಸ್ ಮಾಜಿ ನಿರ್ದೇಶಕ ಚೆಲುವರಾಜು, ಮುಖಂಡರಾದ ಬಸವಣ್ಣ, ವೆಂಕಟೇಶ್ ರಘು, ಕೆಂಪರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts