More

    ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮ : ಶಾಸಕ ಸಿ.ಎಸ್.ನಿರಂಜನಕುಮಾರ್ ಮಾಹಿತಿ

    ಚಾಮರಾಜನಗರ : ಕೋಟ್ಯಂತರ ರೂ. ಅನುದಾನದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮವಹಿಸಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು.

    ಗುರುವಾರ ಗುಂಡ್ಲುಪೇಟೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿ, ತಾವು ಶಾಸಕರಾಗಿ ಆಯ್ಕೆಯಾದ ನಂತರ 800 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದ ರಸ್ತೆ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಆರೋಗ್ಯಕ್ಕಾಗಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲಿಸಲಾಗಿದೆ. ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಎಕ್ಸ್‌ಪ್ರೆಸ್ ಲೈನ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


    ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಅಗತ್ಯ ಅನುದಾನ ನೀಡಲಾಗಿದೆ. ಬಡಾವಣೆಯ ನಿವಾಸಿಗಳ ಅನುಕೂಲಕ್ಕೆ ಉದ್ಯಾನದಲ್ಲಿ ತೆರೆದ ಜಿಮ್ ಆರಂಭಿಸಲಾಗಿದೆ. ಎಲ್ಲ ಬಡಾವಣೆಗಳಿಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಎರಡು ದಶಕಗಳಿಂದ ನಿರುಪಯುಕ್ತವಾಗಿದ್ದ ಯುಜಿಡಿಯನ್ನು ಹೊಸದಾಗಿ ನಿರ್ಮಿಸಿ ಬಳಕೆಗೆ ತರಲಾಗಿದೆ ಎಂದರು.


    ವಸತಿ ಯೋಜನೆಯಲ್ಲಿ ಸುಮಾರು 1500ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಮನೆ ನೀಡಲಾಗಿದ್ದು, ಪಟ್ಟಣದ ಕಿತ್ತೂರುರಾಣಿ ಚನ್ನಮ್ಮ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ಸಾರಿಗೆ ಬಸ್ ನಿಲ್ದಾಣದ ಎದುರು ರಸ್ತೆಗಳನ್ನು ರಾಜಪಥವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.


    ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ನಾಗೇಶ್, ಶಶಿಧರ್(ದೀಪು), ಕಿರಣ್‌ಗೌಡ, ಮಂಗಳಮ್ಮ, ಬಿಜೆಪಿ ಮಂಡಲಾಧ್ಯಕ್ಷ ಜಗದೀಶ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಮಲ್ಲೇಶ್ ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts