More

    ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಮುಖ್ಯ

    ಕುಶಾಲನಗರ: ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಸಸಕುಮಾರ್ ಕಿವಿಮಾತು ಹೇಳಿದರು.
    ಗುಮ್ಮನಕೊಲ್ಲಿ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 2022-23ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆರೋಗ್ಯ ಹೊಂದುವಂತೆ ತಿಳಿಸಿದರು.
    ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುವ ಕಾರಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.
    ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್ ಶಾಲಾ ವಾರ್ಷಿಕ ವರದಿ ವಾಚಿಸಿದರು. ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಯಶೋದಾ, ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ತಿಮ್ಮಯ್ಯ, ಗೋವಿಂದರಾಜ್, ಎಚ್.ಎಸ್.ಪ್ರಕಾಶ್, ಹರೀಶ್, ಭಾಗ್ಯಾ, ಶಿಕ್ಷಕ ಶಿವಲಿಂಗ, ನಿಂಗೇಗೌಡ, ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಶಶಿ ಉಪಸ್ಥಿತರಿದ್ದರು. ಕ್ರೀಡೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಮನ ಸೆಳೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts