More

    ಪಠ್ಯೇತರ ಚಟುವಟಿಕೆ ಹೆಚ್ಚಿಸಲು ಯತ್ನ

    ಧಾರವಾಡ: ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಈರಣ್ಣ ಜಡಿ ಅವರು ಸೋಮವಾರ ಇಲ್ಲಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಲ್ಲಿ ಸಾಹಿತ್ಯ, ಸಂಗೀತ, ಕಲೆ, ಶಿಕ್ಷಣ, ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮಕ್ಕಳು ಪಠ್ಯೇತರವಾಗಿಯೂ ಬೆಳೆಯಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲ ಜಿಲ್ಲೆಗಳಲ್ಲಿ ಚಟುವಟಿಕೆಗಳ ವಿಸ್ತರಣೆಗೆ ಕ್ರಮ ವಹಿಸಲಾಗುವುದು ಎಂದರು.

    ಪ್ರಸ್ತುತ ಅಕಾಡೆಮಿಗೆ ಸರ್ಕಾರ ವಾರ್ಷಿಕ 3 ಕೋಟಿ ರೂ. ಅನುದಾನ ನೀಡುತ್ತಿದೆ. ಮಕ್ಕಳ ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಯ ಹಿತದೃಷ್ಟಿಯಿಂದ ವಿನೂತನ ಯೋಜನೆಗಳನ್ನು ಜಾರಿಗೆ ತರಲು ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. ಹೀಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

    ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಈರಣ್ಣ ಜಡಿಯವರು ಅಕಾಡೆಮಿ ಮುನ್ನಡೆಸಲು ಉತ್ಸುಕರಾಗಿದ್ದಾರೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯಿಂದ ಪ್ರೋತ್ಸಾಹ ನೀಡಲಾಗುವುದು. ಅಧ್ಯಕ್ಷರು ರಾಜಕೀಯ ಹಿನ್ನೆಲೆ ಹೊಂದಿದ್ದರೂ ಮಕ್ಕಳಿಗಾಗಿ ವಿವಿಧ ಯೋಜನೆಗಳನ್ನು ರೂಪಿಸುವ ಭರವಸೆ ಇದೆ. ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು ಹೆಚ್ಚಿನ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಿದರೆ, ಮಂಜೂರು ಮಾಡಲು ಪ್ರಯತ್ನಿಸಲಾಗುವುದು ಎಂದರು.ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಾಜಿ ಶಾಸಕರಾದ ಸೀಮಾ ಮಸೂತಿ, ಎಸ್.ವಿ. ಸಂಕನೂರ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಮಾಜಿ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts