More

    ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ

    ಸೋಮವಾರಪೇಟೆ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ತಹಸೀಲ್ದಾರ್ ಎಸ್.ಎನ್.ನರಗುಂದ ಹೇಳಿದರು.

    ಜಿಲ್ಲಾಡಳಿತ, ಜಿಪಂ, ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಮಕ್ಕಳು ಕಲಿಕೆ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರ ಪ್ರತಿಭೆಯ ಅನಾವರಣವಾಗುತ್ತದೆ ಎಂದರು.

    ಚೌಡ್ಲು ಗ್ರಾಪಂ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಹೊಂದಲು ಸಾಧ್ಯ. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
    ಪಪಂ ಅಧ್ಯಕ್ಷ ಪಿ.ಕೆ.ಚಂದ್ರು, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಬಿಇಒ ಕೆ.ವಿ.ಸುರೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಕರುಂಬಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಪಿ.ಧರ್ಮಪ್ಪ, ಕಾರ್ಯದರ್ಶಿ ರತ್ನ ಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts