More

    ಪಠ್ಯೇತರ ಚಟುವಟಿಕೆಗಳಿಂದ ಮಾನಸಿಕ ಒತ್ತಡ ದೂರ

    ಮದ್ದೂರು : ಮಕ್ಕಳಲ್ಲಿ ಸುಪ್ತವಾಗಿ ಅಡಕವಾಗಿರುವ ಕಲೆಯನ್ನು ಪಾಲಕರು ಮತ್ತು ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದು ತಾಲೂಕಿನ ಕೊಪ್ಪದ ಎಲೈಟ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಅರುಣ್ ಕುಮಾರ್ ಹೇಳಿದರು.

    ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆದ ಎಲೈಟ್ ವಾರ್ಷಿಕ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ವಿಶೇಷ ಕಲೆ ಇರುತ್ತದೆ. ಅದನ್ನು ಗುರುತಿಸಿ ಸೂಕ್ತ ವೇದಿಕೆ ನಿರ್ಮಾಣ ಮಾಡಿಕೊಟ್ಟರೆ ಮಕ್ಕಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು.

    ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ಸಾಂಸ್ಕೃತಿಕ ವಿಷಯಗಳಲ್ಲಿಯೂ ಆಸಕ್ತಿ ಇರುತ್ತದೆ. ಅದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜತೆಗೆ, ಲವಲವಿಕೆ ಹಾಗೂ ಆಸಕ್ತಿ ಯಿಂದ ಮತ್ತಷ್ಟು ಓದಿನ ಕಡೆಗೆ ಗಮನ ನೀಡಲು ಸಹಕಾರಿಯಾಗುತ್ತದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ ಮಾತನಾಡಿ, ಎಲೈಟ್ ಶಾಲೆ ತಾಲೂಕಿನ ಕೊಪ್ಪ ಹೋಬಳಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಾಗುತ್ತಿದೆ. ಈ ವಿಷಯದಲ್ಲಿ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಅರುಣ್‌ಕುಮಾರ್ ಅವರ ಆಸಕ್ತಿ ಹಾಗೂ ಅವರ ಶ್ರಮವಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ಗ್ರಾ.ಪಂ. ಅಧ್ಯಕ್ಷ ನವೀನ್ ಕುಮಾರ್, ಬ್ಯಾಂಕ್ ಆಫ್ ಬರೋಡ ದ ವ್ಯವಸ್ಥಾಪಕರಾದ ಕುಮಿತಾ ಶ್ರೀನಿವಾಸುಲು ರೆಡ್ಡಿ, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪದಾಧಿಕಾರಿಗಳಾದ ಶಿವರಾಜ್, ಸಿದ್ದರಾಜು, ಸೋಮು, ರಮೇಶ್, ಜಗದೀಶ್, ರಾಮಕೃಷ್ಣ, ಮಹೇಶ್, ದೀಪಕ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts