More

    ಪತ್ರಕರ್ತರಿಗೆ ಜಿಲ್ಲಾಡಳಿತದ ಗುರುತಿನ ಚೀಟಿ

    ಬೆಳಗಾವಿ: ಜಿಲ್ಲೆಯ ಹಲವು ಕಡೆಗಳಲ್ಲಿ ಈಚೆಗೆ ಯೂಟ್ಯೂಬ್​ ಚಾನಲ್​ ಮತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದಿಂದ ಅಧಿಕೃತ ಗುರುತಿನ ಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ತಿಳಿಸಿದರು.

    ನಕಲಿ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್​’ ಪದ ದುರ್ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಜತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನ್ಯತೆ ಪಡೆದ ಮಾಧ್ಯಮ ಸಂಸ್ಥೆಗಳು ನೀಡುವ ಶಿಫಾರಸು ಪತ್ರವನ್ನು ಆಧರಿಸಿ, ಆಯಾ ಸಂಸ್ಥೆಯ ವರದಿಗಾರರಿಗೆ ಜಿಲ್ಲಾಡಳಿತ ವತಿಯಿಂದ ಗುರುತಿನ ಚೀಟಿ ನೀಡಲಾಗುತ್ತದೆ.

    ಸರ್ಕಾರಿ ಕಾರ್ಯಕ್ರಮಗಳಿಗೆ ಹಾಗೂ ಸಭೆ&ಸಮಾರಂಭಗಳಿಗೆ ಅಂತಹವರಿಗೆ ಮಾತ್ರ ಅವಕಾಶವಿದೆ. ಈ ಬಗ್ಗೆ ಎಲ್ಲ ಇಲಾಖೆಗಳಿಗೂ ಮಾಹಿತಿ ಕೂಡ ನೀಡಲಾಗುವುದು. ಮಾಧ್ಯಮ ಸಂಸ್ಥೆಗಳು ಕೂಡ ಈ ಕುರಿತು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿರುವ ಮಾಧ್ಯಮ ಸಂಸ್ಥೆಗಳು ತಮ್ಮ ಸಂಸ್ಥೆಯ ವರದಿಗಾರರ ಹೆಸರು, ಗುರುತಿನ ಚೀಟಿ ಮತ್ತಿತರ ವಿವರವನ್ನು ಒಂದು ವಾರದೊಳಗೆ ವಾರ್ತಾ ಇಲಾಖೆಗೆ ಕಳುಹಿಸಿಕೊಟ್ಟರೆ ಅಂತಹವರಿಗೆ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ತಾಲೂಕು ಮಟ್ಟದ ವರದಿಗಾರರಿಗೆ ಕೂಡ ಅವರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಯ ಶಿಫಾರಸು ಆಧರಿಸಿ ತಹಸೀಲ್ದಾರರು ಮತ್ತು ವಾರ್ತಾ ಇಲಾಖೆಯ ಮೂಲಕವೇ ಗುರುತಿನ ಚೀಟಿ ವಿತರಿಸಲಾಗುವುದು. ಆಯಾ ತಾಲೂಕುಗಳ ವರದಿಗಾರರಿಗೆ ನೀಡಲಾದ ಗುರುತಿನ ಚೀಟಿ ಆಯಾ ತಾಲೂಕಿನ ವ್ಯಾಪ್ತಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದರು.

    ಯೂಟ್ಯೂಬ್​ ಚಾನೆಲ್​ಗಳಿಗೆ ಬ್ರೇಕ್​: ಯೂಟ್ಯೂಬ್​ ಚಾನೆಲ್​ ಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಯಾವುದೇ ಕಾರಣಕ್ಕೂ ಗುರುತಿನ ಚೀಟಿ ನೀಡುವುದಿಲ್ಲ. ಜಿಲ್ಲಾಧಿಕಾರಿ ಕಚೇರಿ ಸೇರಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಅಧಿಕೃತ ಮಾಧ್ಯಮ ಸಂಸ್ಥೆಗಳ ವರದಿಗಾರರಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗುವುದು. ಅಧಿಕೃತ ಮಾಧ್ಯಮಗಳ ಪ್ರತಿನಿಧಿಗಳಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಸ್ಪಷ್ಟ್ಟಪಡಿಸಿದರು. ಅನಧಿಕೃತ ಪತ್ರಕರ್ತರು ಸರ್ಕಾರಿ ಕಚೇರಿಗಳಿಗೆ ತೆರಳಿ ಅಧಿಕಾರಿಗಳಿಗೆ ಕಿರುಕುಳ ನೀಡುವ ಪ್ರಕರಣ ಕಂಡುಬಂದರೆ ತಕ್ಷಣವೇ ಮಾಹಿತಿ ನೀಡಬಹುದು ಎಂದರು.

    ಪೊಲೀಸ್​ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ನಗರದಲ್ಲಿ ಪ್ರೆಸ್​ ಪದ ಹಾಕಿಕೊಂಡು ಸಂಚರಿಸುವ ನಕಲಿ ಪತ್ರಕರ್ತರನ್ನು ತಪಾಸಣೆ ಮಾಡಲು ಸಂಬಧಪಟ್ಟ ಸಂಚಾರಿ ಪೊಲೀಸರಿಗೆ ನಿದೇರ್ಶನ ನೀಡಲಾಗುವುದು ಎಂದರು.

    ಎಸ್ಪಿ ಡಾ.ಸಂಜೀವ ಪಾಟೀಲ ಮಾತನಾಡಿ, ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ ನೀಡಲಾಗುವುದು. ವರದಿಗಾರರು ಕೆಲಸ ಬಿಟ್ಟಾಗ ಅದನ್ನು ತಕ್ಷಣವೇ ವಾರ್ತಾ ಇಲಾಖೆಗೆ ತಿಳಿಸಬೇಕು ಎಂದು ಹೇಳಿದರು. ಇದೇ ವೇಳೆ ಸಲಹೆ ನೀಡಿದ ಮಾಧ್ಯಮ ಪ್ರತಿನಿಧಿಗಳು, ಸ್ವಯಂೂಷಿತ ಮಾಧ್ಯಮವಾಗಿರುವ ಯೂಟ್ಯೂಬ್​ ಚಾನೆಲ್​ಗಳು ಮತ್ತು ನಕಲಿ ಪತ್ರಕರ್ತರ ಹಾವಳಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತು ಪೊಲೀಸ್​ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು.

    ಯೂಟ್ಯೂಬ್​ ಚಾನೆಲ್​ ಮಾಡಿಕೊಂಡು ಎಲ್ಲರೂ ಸ್ವಯಂೂಷಿತ ಪತ್ರಕರ್ತರಾಗುತ್ತಿದ್ದಾರೆ. ಇದರಿಂದ ಮಾಧ್ಯಮಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಮೇಲ್​ ಐಡಿ ಇರುವರು ಯೂಟ್ಯೂಬ್​ ಚಾನೆಲ್​ ಮಾಡಬಹುದು. ಇದನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಸಾವಿರಾರು ಇಂತಹ ಚಾನೆಲ್​ ಗಳು ಕಾರ್ಯನಿರ್ವಹಿಸುತ್ತಿವೆ. ಇಂತಹವುಗಳಿಗೆ ಕಡಿವಾಣ ಹಾಕಬೇಕಿದೆ.

    ಜಿಲ್ಲಾಡಳಿತ ಮತ್ತು ಪೊಲೀಸ್​ ಇಲಾಖೆ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಮಾಧ್ಯಮ ಪ್ರತಿನಿಧಿಗಳು ಭರವಸೆ ನೀಡಿದರು. ನಕಲಿ ಪತ್ರಕರ್ತರು ಯಾರೇ ಇರಲಿ ಎಲ್ಲರ ವಿರುದ್ಧ ಮುಲಾಜಿಲ್ಲದೇ ಪ್ರಕರಣ ದಾಖಲಿಸಿ. ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ಬ್ಲಾ$್ಯಕ್​ ಮೇಲ್​ ಮಾಡಿದರೆ ತಕ್ಷಣವೇ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

    ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಬೇಕು. ಅಧಿಕೃತ ಮಾಧ್ಯಮ ಸಂಸ್ಥೆಗಳ ಪಟ್ಟಿಯನ್ನು ಎಲ್ಲ ಕಚೇರಿಗೆ ಕಳುಹಿಸಬೇಕು. ಇದರಿಂದ ನಕಲಿ ಪತ್ರಕರ್ತರ ಹಾವಳಿಯನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು. ಮುದ್ರಣ, ಎಲೆಕ್ಟ್ರಾನಿಕ್​ ಮಾಧ್ಯಮಗಳ ವರದಿಗಾರರು, ಛಾಯಾಗ್ರಾಹಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts