More

    ಪದವಿ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಿ:ಉಪನ್ಯಾಸಕ ಸುಂದರೇಶ್

    ಹಾಸನ: ವಿದ್ಯಾರ್ಥಿಗಳು ಪದವಿ ವ್ಯಾಸಾಂಗದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದು ಹೊಳೆನರಸೀಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಸುಂದರೇಶ್ ಸಲಹೆ ನೀಡಿದರು.
    ನಗರದ ಗಂಧದಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಸೆಲ್, ಐಕ್ಯೂಎಸ್‌ಇ ಮತ್ತು ಕನ್ನಡ ವಿಭಾಗದವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಯ ಶ್ರಮವಹಿಸಿ ನಿರಂತರ ಅಧ್ಯಯನ ಮಾಡುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ. ನಿರಂತರ ಅಧ್ಯಯನದಿಂದ ಸಾಧನೆ ಸಾಧ್ಯ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಜಿ.ಕವಿತಾ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ನೀಡುವಂತಹ ಕೆಲಸವನ್ನು ಮಾಡಲಾಗುತ್ತಿದೆ, ಅದಕ್ಕೆ ವಿದ್ಯಾರ್ಥಿಗಳ ಸಹಕಾರ ಕೂಡ ಮುಖ್ಯ. ಈ ತರಬೇತಿಯ ಸದುಪಯೋಗವನ್ನ ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದರು.
    ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕು, ಪರೀಕ್ಷೆಗೆ ಯಾವ ರೀತಿ ಪೂರ್ವ ತಯಾರಿಯನ್ನು ನಡೆಸಬೇಕು ಎಂಬುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಡಲಾಯಿತು.
    ಕಾರ್ಯಕ್ರಮದಲ್ಲಿ ಪ್ಲೇಸ್ಮೆಂಟ್ ಸೆಲ್ ಸಂಚಾಲಕ ಪಿ.ನಂದನ್, ಕನ್ನಡ ವಿಭಾಗದ ಮುಖ್ಯಸ್ಥ ಡಿ.ಕೆ.ಮಂಜಯ್ಯ, ಐಕ್ಯೂಎಸ್‌ಇ ಸಂಚಾಲಕಿ ಡಿ.ಜಿ.ರಮ್ಯ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಹೆಚ್.ಇ.ಸಾವಿತ್ರಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಂ.ವಿ.ಹೇಮಾವತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts