More

    ಪಪಂ ಸಭೆಯಲ್ಲಿ ಸಮಸ್ಯೆಗಳ ಸದ್ದು



    ಹಾಸನ : ಆಲೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಸಿ.ವೇದಾ ಸುರೇಶ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪಟ್ಟಣ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆಯಲ್ಲಿ ಶುದ್ಧ ಕುಡಿಯುವ ನೀರು ಘಟಕ, ಸಂತೆ ಸ್ಥಳಾಂತರ, ಬೀದಿ ದೀಪಗಳ ನಿರ್ವಹಣೆ ವಿಷಯ ಕುರಿತು ಚರ್ಚಿಸಲಾಯಿತು.


    ಉಪಾಧ್ಯಕ್ಷ ನಿಂಗರಾಜು ಮಾತನಾಡಿ, ಕೆಇಬಿ ವೃತ್ತ ಸಮೀಪ ಖಾಸಗಿ ಬೇಕರಿ ಮಾಲೀಕರೊಬ್ಬರು ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕವಿತಾ ಬೇಕರಿ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಅವರ ಉತ್ತರ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆ ಗಮನಕ್ಕೆ ತಂದರು.


    ಹರೀಶ್ ಮಾತನಾಡಿ, ಸರ್ಕಾರಿ ಆಸ್ಪತ್ರೆ ಮುಂಭಾಗ ನಡೆಯುತ್ತಿದ್ದ ಸಂತೆ ಸ್ಥಳವನ್ನು ಮಸೀದಿ ಪಕ್ಕದಲ್ಲಿ ಇರುವ ಖಾಲಿ ಜಾಗಕ್ಕೆ ಸ್ಥಳಾಂತರ ಮಾಡಬೇಕು. ಆಸ್ಪತ್ರೆಗೆ ಬರುವ ರೋಗಿಗಳ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕು. ಮುಖ್ಯ ರಸ್ತೆಗಳಿಗೆ ಬೀದಿ ದೀಪ ಅಳವಡಿಸಬೇಕು ಎಂದು ಆಗ್ರಹಿಸಿದರು.


    ರಮೇಶ್ ಮಾತನಾಡಿ, ಪಟ್ಟಣದಲ್ಲಿ ಪಾದಚಾರಿಗಳಿಗೆ ತೊಂದರೆಯಾಗಿದೆ. ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂದೆಯೇ ವಿವಿಧ ಸಾಮಗ್ರಿಗಳನ್ನು ಇಟ್ಟುಕೊಳ್ಳುತ್ತಿದ್ದಾರೆ. ಇದರಿಂದ ಜನರು ಓಡಾಡುವುದಕ್ಕೆ ಅಡಚಣೆಯಾಗಿದೆ ಎಂದು ದೂರಿದರು.
    ನಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ತಿಳಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿ.ಪಿ.ರಾಣಿ ಕಿಡಿಕಾರಿದರು.
    ಸಭೆಯಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮುಖ್ಯಾಧಿಕಾರಿ ನಟರಾಜ್, ಆರೋಗ್ಯಾಧಿಕಾರಿ ಮಂಜುನಾಥ್, ಇಂಜಿನಿಯರ್ ಕವಿತಾ ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts