More

    ಪಪಂ ಸಿಬ್ಬಂದಿ ನೇತೃತ್ವದಲ್ಲಿ ಮಹಿಳೆಯ ಶವಸಂಸ್ಕಾರ

    ಯಳಂದೂರು: ಅನಾರೋಗ್ಯದಿಂದ ಮೃತಪಟ್ಟ ಮಹಿಳೆ ಕಾಳಮ್ಮ ಅವರ ಅಂತ್ಯಸಂಸ್ಕಾರ ಬುಧವಾರ ಪಟ್ಟಣದ ಸುವರ್ಣಾವತಿ ಹೊಳೆಯ ಸಮೀಪದಲ್ಲಿರುವ ರುದ್ರಭೂಮಿಯಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೊಲೀಸರ ನೇತೃತ್ವದಲ್ಲಿ ನಡೆಯಿತು.

    ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಮೃತಳ ಪತಿ ರವಿ ಮಂಗಳವಾರ ಮಧ್ಯಾಹ್ನ ಪಟ್ಟಣದ ಅಗ್ರಹಾರ ಬೀದಿಯಲ್ಲಿ ಪತ್ನಿಯ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಕೊಂಡು ಹೆಗಲ ಮೇಲೆ ಹಾಕಿಕೊಂಡು ಸಾಗಿಸುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪೊಲೀಸರು ವಿಚಾರಿಸಿದಾಗ, ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದು ಶವಸಂಸ್ಕಾರ ಮಾಡಲು ಹಣವಿಲ್ಲದ ಕಾರಣ ಶವವನ್ನು ಸುವರ್ಣಾವತಿ ಹೊಳೆಯಲ್ಲಿ ಹಾಕುವುದಕ್ಕೆ ಹೋಗುತ್ತಿರುವುದಾಗಿ ತಿಳಿಸಿದನು.


    ಈ ಕುರಿತು ಪ್ರಕರಣ ದಾಖಲಿಸಿ, ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಬುಧವಾರ ಸಂಜೆ ಶವವನ್ನು ಮೃತಳ ಪತಿ ರವಿ, ಪೊಲೀಸರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಜತೆಗೂಡಿ ಅಂತ್ಯಸಂಸ್ಕಾರ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts