More

    ಪೌರಕಾರ್ಮಿಕರಿಗೆ ನಿವೇಶನ ನೀಡಲು ಪ್ರಸ್ತಾವನೆ

    ಕಂಪ್ಲಿ: ಪೌರಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಉದ್ಯೋಗಸ್ಥರನ್ನಾಗಿ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಹೇಳಿದರು.

    ಇದನ್ನೂ ಓದಿ: ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರದೀಪ್​ ಈಶ್ವರ್​​

    ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ ನಿವೇಶನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಕ್ರಮವಹಿಸಲಾಗುವುದು.

    ಪೌರಕಾರ್ಮಿಕರ ಅಭಿವೃದ್ಧಿಗಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪೌರಕಾರ್ಮಿಕ ಎಚ್.ರವಿ ಮಾತನಾಡಿ, ಪೌರಕಾರ್ಮಿಕರಿಗೆ ನಿವೇಶನದೊಂದಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಬಹುವರ್ಷಗಳಿಂದ ಒತ್ತಾಯಿಸುತ್ತಿದ್ದು ಕೂಡಲೇ ಈಡೇರಿಸಬೇಕು.

    ಅಗತ್ಯ ಸುರಕ್ಷಾ ಸಾಧನೋಪಕರಣಗಳು, ಸ್ವಯಂ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವಂತೆ ಬಾಲ್ಯದಲ್ಲಿಯೇ ಪ್ರೇರೇಪಿಸಲು ಪಠ್ಯಗಳಲ್ಲಿ ಸ್ವಚ್ಛತೆ ಹಾಗೂ ಪೌರಕಾರ್ಮಿಕ ಮಹತ್ವ ಕುರಿತು ಪಾಠಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

    ಪೌರಕಾರ್ಮಿಕ ಹುದ್ದೆಗೆ ನೇಮಕಗೊಂಡ 17 ಜನರಿಗೆ ನೇಮಕ ಪತ್ರ, ಅಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಉದ್ಭವ ಮಹಾಗಣಪತಿ ದೇವಸ್ಥಾನದಿಂದ ಮೆರವಣಿಗೆ ನಡೆಯಿತು.

    ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ವೀರಾಂಜನೇಯಲು, ಟಿ.ವಿ.ಸುದರ್ಶನರೆಡ್ಡಿ, ಲಡ್ಡು ಹೊನ್ನೂರವಲಿ, ಲೆಕ್ಕಿಗ ರಮೇಶ ಬೆಳಂಕರ್, ಮೇಸ್ತ್ರಿಗಳಾದ ವೆಂಕಟೇಶ್, ಓಬಳೇಶ್, ಪ್ರಮುಖರಾದ ಆಟೋ ರಾಘವೇಂದ್ರ, ಬಿ.ಜಾಫರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts