More

    ಪ್ರೀತಂ ಗೌಡರ ಜತೆಗೂ ಮಾತನಾಡುತ್ತೇನೆಂದ ಪ್ರಜ್ವಲ್ ರೇವಣ್ಣ

    ಹಾಸನ: ಲೋಕಸಭೆ ಚುನಾವಣೆಯ ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿ-ಜೆಡಿಎಸ್ ಎರಡು ಪಕ್ಷದವರು ಸೇರಿ ಎಲ್ಲಾ ಭಾಗದಲ್ಲೂ ಸಭೆ ಮಾಡುತ್ತೇವೆ. ಕಡೂರಿನಲ್ಲಿ ಬೆಳ್ಳಿ ಪ್ರಕಾಶ್ ಅಣ್ಣ, ಬೇಲೂರು ಶಾಸಕ ಎಚ್.ಕೆ. ಸುರೇಶಣ್ಣ, ಸಕಲೇಶಪುರ ಶಾಸಕ ಸಿಮೆಂಟ್ ಮಂಜಣ್ಣನ ಜತೆ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಪ್ರೀತಂ ಗೌಡರ ಜತೆಗೂ ಮಾತನಾಡುತ್ತೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

    ನಗರದ ಸಂಸದರ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರ ಜತೆ ಮಾತನಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಮೊದಲು ಸ್ಥಳೀಯ ಮಟ್ಟದಲ್ಲಿ ಸಭೆ ಮಾಡುತ್ತೇವೆ. ನಂತರ ದೊಡ್ಡಮಟ್ಟದ ರ‌್ಯಾಲಿ ಮಾಡುತ್ತೇವೆ. ಯಡಿಯೂರಪ್ಪ, ವಿಜಯೇಂದ್ರ ಅಣ್ಣ, ಕುಮಾರಣ್ಣ ಬರುವ ಸಂಬಂಧ ನಮ್ಮ ಪಕ್ಷದ ಪೂರ್ವಭಾವಿ ಸಭೆಗಳು ನಡೆದಿವೆ. ಈಗ ಜಂಟಿ ಪೂರ್ವಭಾವಿ ಸಭೆಗಳು ನಡೆಯಬೇಕು. ಮಾ.12ರಿಂದ 15ರ ಒಳಗೆ ಚುನಾವಣೆ ಘೋಷಣೆ ಆಗಬಹುದು. ದೇವೇಗೌಡರು ಎಲ್ಲಾ ಕಡೆ ಪ್ರಚಾರ ಮಾಡುತ್ತಾರೆ. ದೇವೇಗೌಡರಿಗೆ ಹೆಚ್ಚು ಅನುಭವವಿದೆ. ಎಲ್ಲವನ್ನೂ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಐದು ವರ್ಷದಲ್ಲಿ ಜಿಲ್ಲೆಯ ಎಲ್ಲಾ ಭಾಗಕ್ಕೂ ಹೋಗಿದ್ದೇನೆ. ಈ ಸಂದರ್ಭದಲ್ಲಿ ಎಲ್ಲಾ ಕಡೆ ಚೆನ್ನಾಗಿ ಪ್ರತಿಕ್ರಿಯೆ ಬಂದಿದ್ದು, ಗೆಲ್ಲುವ ವಿಶ್ವಾಸ ಮೂಡಿಸಿದೆ. ಎರಡು ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ನಾವು ಖಂಡಿಯವಾಗಿಯೂ ದೊಡ್ಡ ಮಟ್ಟದ ಅಂತರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ಲುತ್ತೇನೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಭಾನುವಾರ ಅಥವಾ ಸೋಮವಾರ ಬಿಜೆಪಿ-ಜೆಡಿಎಸ್ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್‌ಗಳನ್ನು ಘೋಷಣೆ ಮಾಡುತ್ತಾರೆ. ಜೆಡಿಎಸ್‌ಗೆ ಎಷ್ಟು ಟಿಕೆಟ್ ಕೊಡಬೇಕು ಎಂಬುದನ್ನು ಎರಡು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ.

    ಕಾಂಗ್ರೆಸ್‌ನಿಂದ ಶ್ರೇಯಸ್ ಪಟೇಲ್‌ಗೆ ಟಿಕೆಟ್ ಘೋಷಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಕೆಲಸ ಮಾಡಿರುವವರು ಬಂದರೆ ಮಾತನಾಡಬಹುದು. ಕೆಲಸ ಮಾಡದೇ ಸುಮ್ಮನೆ ಓಡಾಡಿಕೊಂಡು ಬರುವವರ ಬಗ್ಗೆ ನಾನೇನು ಮಾತನಾಡಲಿ ಎಂದು ಮಾರ್ಮಿಕವಾಗಿ ಹೇಳಿದರು.

    ಮಂಡ್ಯ ಹಾಗೂ ಕೋಲಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಅಲ್ಲಿ ಯಾರೂ ನಿಲ್ಲುತ್ತಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಕುಮಾರಣ್ಣ ಸ್ಪರ್ಧಿಸಿದರೆ ಒಳ್ಳೆಯದೇ ಆಗುತ್ತೆ. ಕುಮಾರಣ್ಣ ನಿಂತರೆ ಹಳೇಮೈಸೂರು ಭಾಗದಲ್ಲಿ ಅಲೆ ಏಳುತ್ತದೆ. ಕುಮಾರಸ್ವಾಮಿ ನಿಂತರೆ ನಮಗೆ ಒಳ್ಳೆಯದೇ ಆಗುವುದರಿಂದ ಅವರ ಸ್ಪರ್ಧೆಯನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts