More

    ಪರಿಶಿಷ್ಟರ ಮೀಸಲು ಹಣ ಸದ್ಬಳಕೆಯಾಗಲಿ  – ಅಧಿಕಾರಿಗಳಿಗೆ ಡಿಸಿ ಶಿವಾನಂದ ಕಾಪಶಿ ಸೂಚನೆ -ಎಸ್‌ಸಿಎಸ್‌ಪಿ-ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿ ಸಭೆ 

    ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಇಲಾಖಾವಾರು ವಿವಿಧ ಯೋಜನೆಗಳಡಿ ಮೀಸಲು ಅನುದಾನವನ್ನು ಸಂಪೂರ್ಣ ಮತ್ತು ಸಮರ್ಪಕವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ, ಪರಿಶಿಷ್ಟ ಪಂಗಡದ ಗಿರಿಜನ ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಪರಿಶಿಷ್ಟರ ವಿಶೇಷ ಘಟಕ ಯೋಜನೆಯಡಿ ಶೇ.40 ಕ್ಕಿಂತ ಹೆಚ್ಚು ಎಸ್ಸಿ-ಎಸ್ಟಿ ಜನಸಂಖ್ಯೆ ಇರುವ ಗ್ರಾಮಗಳ ಕಾಲನಿಗಳಲ್ಲಿ ವ್ಯವಸ್ಥಿತ ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
    ಗ್ರಾಮಾಂತರ ಕೈಗಾರಿಕಾ ಕೇಂದ್ರಗಳಿಂದ ಗ್ರಾಮ ಪಂಚಾಯಿತಿಗಳಲ್ಲಿನ ನಿರುದ್ಯೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಉತ್ತಮ ಗುಣಮಟ್ಟದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ನೀಡಬೇಕು. ಈಗಾಗಲೇ ಸೌಲಭ್ಯ ಪಡೆದವರನ್ನು ಬಿಟ್ಟು ಇತರರನ್ನು ಪರಿಗಣಿಸಬೇಕು ಎಂದರು.
    ನಗರದ ಟಿ.ವಿ.ಸ್ಟೇಷನ್ ಬಳಿ ಇರುವ ಕೆರೆಯ ನೀರಿನ ಮಟ್ಟ ಕುಸಿದಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಕುಂದುವಾಡ ಕೆರೆಗೆ ರಾಜನಹಳ್ಳಿ ನದಿಯಿಂದ ಜಾಕ್‌ವೆಲ್ ಮೂಲಕ ನೀರನ್ನು ಪೂರೈಕೆ ಮಾಡುತ್ತಿದ್ದು, ಆ ಭಾಗದ ಜನರಿಗೆ ನೀರಿನ ಕೊರತೆಯಿಲ್ಲ ಎಂದು ಹೇಳಿದರು.
    ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಡಿಡಿಪಿಐ ಜಿ.ಆರ್.ತಿಪ್ಪೇಶಪ್ಪ, ಡಿಎಚ್‌ಒ ಡಾ. ನಾಗರಾಜ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts