More

    ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಆಗ್ರಹ

    ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗೊಂಡ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕರ್ನಾಟಕ ಪ್ರದೇಶ ಗೊಂಡ ಕುರುಬ ಸಂಘದ ತಾಲೂಕು ಘಟಕದಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಇಲ್ಲಿನ ಸುಭಾಷ್ ವೃತ್ತದಿಂದ ತಹಸೀಲ್ ಕಚೇರಿವರೆಗೆ ಕಾಲರನಡಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ತಿಂಥಣಿ ಬ್ರಿಜ್ನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಲಿಂಗಬೀರ ದೇವರು ಮಾತನಾಡಿ, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಕುರುಬರನ್ನು ಗೊಂಡ ಪರ್ಯಾಯವಾಗಿ ಪರಿಗಣಿಸಲು 1997ರಲ್ಲಿ ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಕೇಂದ್ರದ ಆದೇಶದ ಮೇರೆಗೆ 2014ರಲ್ಲಿ ಸಿದ್ದರಾಮಯ್ಯ ಸರಕಾರ ಕುಲಶಾಸ್ತ್ರೀಯ ಅಧ್ಯಯನದ ವರದಿಯ ಪೂರಕ ದಾಖಲೆಗಳೊಂದಿಗೆ ಮೂರು ಬಾರಿ ಕೇಂದ್ರ ಸಕರ್ಾರಕ್ಕೆ ಶಿಫಾರಸ್ಸು ಮಾಡಿತ್ತು ಎಂದು ವಿವರಿಸಿದರು.

    ಅಲೆಮಾರಿಗಳಾಗಿ, ಸಂಚಾರಿಗಳಾಗಿ ಊರೂರು ಸುತ್ತುತ್ತಿದ್ದ ಗೊಂಡ ಕುರುಬರನ್ನು ಬ್ರಿಟೀಷರ ಕಾಲದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿತ್ತು. ಅಲ್ಲದೆ ಡಾ.ಬಿ.ಆರ್.ಅಂಬೇಡ್ಕರ್ ಸಹ ಸಂವಿಧಾನದಲ್ಲಿ ಕುರುಬರನ್ನು ಎಸ್ಟಿ ಪಂಗಡಕ್ಕೆ ಸೇರಿಸಿದ್ದರು ಎಂದರು.


    ಸಮಾಜದ ತಾಲೂಕಾಧ್ಯಕ್ಷ ಹೊನ್ನಪ್ಪ ಮುಷ್ಟೂರು ಮಾತನಾಡಿ, ಕುರುಬ ಸಮುದಾಯ ತಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟ ಸಮಾಜದ ಕಟ್ಟಕಡೆಯ ವ್ಯಕ್ತಿಯ ಶೈಕ್ಷಣಿಕ ಮತ್ತು ಸಾಮಾಜಿಕ ನ್ಯಾಯ ಪಡೆಯುವುದಕ್ಕೆ ಆಗಿದೆ. ಗೊಂಡ ಪರ್ಯಾಯ ಪದವೇ ಕುರುಬ. ಕೆಲವರು ಗೊಂಡರು ಎಸ್ಟಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯಲು ತೆಗೆದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ನಾವು ಯಾರು ಸುಳ್ಳು ಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳುವುದಿಲ್ಲ. ನಮ್ಮದು ನ್ಯಾಯೋಚಿತ ಬೇಡಿಕೆಯಾಗಿದೆ. 500 ವರ್ಷಗಳ ಹಿಂದೆ ಕುರುಬರು ಗುಡ್ಡಗಾಡುಗಳಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts